25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

ಅಳದಂಗಡಿ ಸರಕಾರಿ ಪ್ರೌಡ ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಅತಿಥಿ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಶಾಲೆಯಲ್ಲಿ ನಡೆಯಿತು.

ಶಾಲೆಯಲ್ಲಿ ಸುಮಾರು 15 ವರ್ಷ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ದಾರಿದೀಪವಾದ ಜಗದೀಶ್ ಬಿ.ಎಸ್ ರವರು ಇತ್ತೀಚೆಗೆ ನಡೆದ ಶಿಕ್ಷಕರ ವರ್ಗಾವಣೆಯಲ್ಲಿ ಅವರ ಹುಟ್ಟೂರು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹುಲಿಕಲ್ ಪ್ರೌಢ ಶಾಲೆಗೆ ವರ್ಗಾವಣೆ ಪಡೆದುಕೊಂಡಿರುತ್ತಾರೆ.


ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯದ ಗೌರವ ಶಿಕ್ಷಕಿ ಶ್ರೀಮತಿ ಸಾಧನ ರವರು ವಿದ್ಯಾರ್ಥಿ ಗಳಿಗೆ ಪಾಠ ಬೋಧನೆಯ ಜೊತೆಗೆ ಸಹ ಪಠ್ಯ ಚಟುವಟಿಕೆಯ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳ ಪಾಲಿನ ಅಚ್ಚು ಮೆಚ್ಚಿನ ಶಿಕ್ಷಕಿಯಾಗಿದ್ದಾರೆ.


ಶಿಕ್ಷಕರಿಗೆ ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳು, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರು, ವಿದ್ಯಾರ್ಥಿಗಳ ಸಮ್ಮುಖದಲ್ಲಿ, ರಮೇಶ್ ದೇವಾಡಿಗ ರವರ ಅಧ್ಯಕ್ಷತೆಯಲ್ಲಿ ಗೌರವ ಸನ್ಮಾನದೊಂದಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.

ಹಲವಾರು ವಿದ್ಯಾರ್ಥಿಗಳು ಶಿಕ್ಷಕರ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿ ನೆನಪಿನ ಕಾಣಿಕೆಗಳನ್ನು ನೀಡಿದರು. ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಯಾದ ಶಿಕ್ಷಕರು, ಇತರ ಶಾಲೆಗಳಿಂದ ಆಗಮಿಸಿದ ಚಿತ್ರಕಲಾ ಶಿಕ್ಷಕರು, ನಿವೃತ್ತ ಮುಖ್ಯ ಶಿಕ್ಷಕರು ಯಶೋಧರ ಸುವರ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮನೋಹರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪ್ರೌಡ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಹಮ್ಮದ್ ರಿಯಾಜ್ ರವರು ವರ್ಗಾವಣೆಯಾದ ಶಿಕ್ಷಕರಿಗೆ ಶುಭ ಹಾರೈಸಿದರು.
ಶ್ರೀಮತಿ ಲಲಿತಾ ಹಾಗೂ ಜಗದೀಶ್ ರವರು ಸನ್ಮಾನ ಪತ್ರವನ್ನು ವಾಚಿಸಿದರು.

ಗಣಿತ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಸಿಲ್ವಿಯ ಡಿಕೋಸ್ತ ರವರು ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ ಮರಿಯಾ ಸಾಲ್ದಾನ್ಹ ಸ್ವಾಗತಿಸಿ, ಹಿಂದಿ ಶಿಕ್ಷಕಿ ಶ್ರೀಮತಿ ಲಿಲ್ಲಿ ಮ್ಯಾಥ್ಯುರವರು ವಂದಿಸಿದರು.

Related posts

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya
error: Content is protected !!