23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಅಧಿಕಾರ ಸ್ವೀಕರಿಸಿ ಮೂರು ತಿಂಗಳೂ ಆಗಿಲ್ಲ. ಈಗಾಗಲೇ ಸಿದ್ಧರಾಮಯ್ಯ ಸರಕಾರದ ಎಡವಟ್ಟುಗಳು ಒಂದೊಂದೆ ಹೊರಬರುತ್ತಿದ್ದು ಕಾಂಗ್ರೇಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ. ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ, ಅವರು ಕೂಡಲೇ ರಾಜಿನಾಮೇ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಕೆಲ ದಿನಗಳ ಹಿಂದೆ ಆಡಳಿತ ಪಕ್ಷದ ಶಾಸಕರು ಪತ್ರಮುಖೇನ ತಮ್ಮ ಅಸಮಾಧಾನ ಹೊರಹಾಕಿದ್ದರು. ಈ ಪತ್ರ ನಕಲಿ ಎಂದು ಹೇಳಿ ತಪ್ಪನ್ನು ಮುಚ್ಚಿ ಹಾಕಿದ್ದಾರೆ. ನಕಲಿ ಎಂದಾದರೆ ಅದರ ಬಗ್ಗೆ ಸೂಕ್ತ ತನಿಖೆ ಮಾಡಿ ನಕಲಿ ಮಾಡಿದವರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಬಹುದಿತ್ತು. ಹಾಗೆ ಮಾಡದೆ ಮರೆಮಾಚುವ ಕೆಲಸ ನಡೆದಿದೆ. ಅದೇ ರೀತಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ವರ್ಗ ಮಾಡುವಲ್ಲಿ ಅದರಲ್ಲೂ ಪೋಲಿಸ್ ಇಲಾಖೆಯ ವರ್ಗಾವರ್ಗಿಯಲ್ಲೂ ಭ್ರಷ್ಟಾಚಾರ ನಡೆದಿದೆ. ಒಂದೇ ಹುದ್ದೆಗೆ ಎರಡು ಮೂರು ಅಧಿಕಾರಿಗಳನ್ನು ನೇಮಿಸುವುದು ನಡೆದಿರುವುದು ನೋಡಿದರೆ ಇಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವುದು ಮೇಲ್ನೊಟಕ್ಕೆ ಸಾಬೀತಾಗಿದೆ. ತಿಂಗಳ ಹಿಂದೆ ಕಾಂಗ್ರೇಸ್ ಪಕ್ಷದ ಸುರ್ಜೆವಾಲಾ ಅವರು ಬೆಂಗಳೂರಿನಲ್ಲಿ ಅಧಿಕಾರಿಗಳನ್ನು ಸೇರಿಸಿಕೊಂಡು ಸಭೆ ನಡೆಸಿರುವುದು ಅನುಮಾನಕ್ಕೆ ಎಡೆ ಮಾಡಿದೆ. ಇತ್ತೀಚೆಗೆ ಕಾಂಗ್ರೇಸ್ ಹೈಕಮಾಂಡ್ ಕೂಡ ಭ್ರಷ್ಟಾಚಾರ ರಹಿತ ಆಡಳಿತ ನಡೆಸಬೇಕು ಎಂಬ ತಾಕೀತನ್ನೂ ಮಾಡಿರುವುದು ಗಮನಾರ್ಹ. ಇದೀಗ ಮತ್ತೊಂದು ಹಗರಣ ಹೊರಗೆ ಬಿದ್ದಿದೆ. ಕೃಷಿ ಇಲಾಖೆಯ ಏಳು ಮಂದಿ ಸಹಾಯಕ ಕೃಷಿ ನಿರ್ದೇಶಕರುಗಳೇ ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಕಾರ ಯಾವ ದಿಕ್ಕಿಗೆ ಸಾಗುತ್ತಿದೆ ಎಂದು ತಿಳಿಯುತ್ತದೆ. ಕೃಷಿ ಸಚಿವರು, ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಮತ್ತು ಮದ್ದೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳಿಂದ ತಲಾ ಆರರಿಂದ ಎಂಟು ಲಕ್ಷ ರೂ.ಗಳ ಲಂಚದ ಬೇಡಿಕೆ ಇಟ್ಟು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ. ಸಚಿವರ ವಿರುದ್ದ ಅಧಿಕಾರಿಗಳೇ ಸಿಡಿದೆದ್ದಿರುವುದು ರಾಜ್ಯವೇ ಗಮನಿಸುತ್ತಿದೆ. ಹೀಗಾಗಿ ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಾಪಸಿಂಹ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರಲ್ಲದೆ ರಾಜ್ಯದ ಕಾಂಗ್ರೇಸ್ ಸರಕಾರವು ಕೇಂದ್ರದ ಕಾಂಗ್ರೇಸ್ ಹೈಕಮಾಂಡ್‌ನವರಿಗೆ ಎಟಿ ಆಗಿದೆ ಎಂದು ಅಪಾದಿಸಿದ್ದಾರೆ.

Related posts

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya
error: Content is protected !!