23.2 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಮಿತ್ತಬಾಗಿಲು: ಕು. ಸೌಜನ್ಯ ಸಾವಿನ ಪ್ರಕರಣಕ್ಕೆ 11 ವರ್ಷವಾದರೂ ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಇನ್ನೂ ಸಿಗಲಿಲ್ಲ ಅಮಾನುಷ ಕೊಲೆ, ಅತ್ಯಾಚಾರವೆಸಗಿದ ನಿಜವಾದ ಆರೋಪಿಗಳು ಪತ್ತೆಯಾಗಿಲ್ಲ. ಕು. ಸೌಜನ್ಯಳ ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಆ.7ರಂದು ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ ಇವರ ನೇತೃತ್ವದಲ್ಲಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಅರ್ಚಕರ ಮೂಲಕ ಶ್ರೀ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಾದೆ ಕಮಲಾಕ್ಷ ಪೂಜಾರಿ, ಕಾರ್ಯದರ್ಶಿ ಪ್ರಮೀಳಾ, ರಾಜೇಶ್ ಮೂರ್ಜೆ, ಸಮಿತಿ ಸದಸ್ಯ ಮೋಹನ್ ಬಾರೆ ಉಪಸ್ಥಿತರಿದ್ದರು.
ಅಶೋಕ್ ಕುಮಾರ್ ಜೈನ್, ಈಶ್ವರ್ ಗೌಡ, ದಿನೇಶ್ ದೇವಸ್ಯ, ಓಬಯ್ಯ ಗೌಡ, ಪ್ರಸಾದ್ ಕೆ.ವಿ. , ರೋಹಿತ್ ಕಜೆ, ಜಯಚಂದ್ರ ಬಾರಂತ್ಯಾರು, ಅಖಿಲ್ ಕಜೆ, ನಾರಾಯಣ ಶೆಟ್ಟಿ, ಲೋಕೇಶ್ ಶೆಟ್ಟಿ ಹಾಗೂ ಊರಿನ ಭಕ್ತರು ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

Related posts

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!