ಪುದುವೆಟ್ಟು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ಯ್ರಾಗ್ಸ್ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ರಾಜು, ಕಾರ್ಯದರ್ಶಿ ಸರೋಜಿನಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.
