March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಪ್ರಕಟಿಸಲಾದ “ಜ್ಞಾನಶರಧಿ” ಮತ್ತು ಜ್ಞಾನವಾರಿಧಿ” ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆ. 19 ರಂದು  ಶನಿವಾರ ಬೆಳಿಗ್ಗೆ ಹನ್ನೊಂದು ಗಂಟೆಗೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಮೈಸೂರಿನ ಖ್ಯಾತ ವಾಗ್ಮಿ ಪ್ರೊ. ಕೃಷ್ಣೇಗೌಡ ಲೋಕಾರ್ಪಣೆ ಮಾಡಲಿದ್ದಾರೆ.


ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ವಿತರಿಸಲಿದ್ದಾರೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ತಿಳಿಸಿದ್ದಾರೆ.


ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಇಲಾಖೆಯ ನಿರ್ದೇಶಕಿ ಸುಮಂಗಲ ಶುಭಾಶಂಸನೆ ಮಾಡುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.


ಕುಂಚ-ಗಾನ-ನೃತ್ಯ ವೈಭವ: ಸಂಗೀತ ವಿದುಷಿ ಶ್ರೇಯ ಕೊಳತ್ತಾಯರ ಸುಶ್ರಾವ್ಯ ಗಾಯನಕ್ಕೆ ದಾವಣಗೆರೆಯ ಚಿತ್ರಕಲಾವಿದ ಬಾಬಲೇಶ್ವರ ಕುಂಚದಲ್ಲಿ ಚಿತ್ರಕಲೆ ರೂಪಿಸಿದರೆ ಮಂಗಳೂರಿನ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿಶೇಖರ್ ನೃತ್ಯ ಪ್ರದರ್ಶನ ನೀಡಲಿದ್ದಾರೆ.

Related posts

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!