25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಪ್ರಕಟಿಸಲಾದ “ಜ್ಞಾನಶರಧಿ” ಮತ್ತು ಜ್ಞಾನವಾರಿಧಿ” ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆ.19 ರಂದು ಬೆಳಿಗ್ಗೆ 11 ಗಂಟೆಗೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಮೈಸೂರಿನ ಖ್ಯಾತ ವಾಗ್ಮಿ ಪ್ರೊ. ಕೃಷ್ಣೇಗೌಡ ಲೋಕಾರ್ಪಣೆ ಮಾಡಲಿದ್ದಾರೆ.

ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ವಿತರಿಸಲಿದ್ದಾರೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಇಲಾಖೆಯ ನಿರ್ದೇಶಕಿ ಸುಮಂಗಲ ಶುಭಾಶಂಸನೆ ಮಾಡುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.

ಕುಂಚ-ಗಾನ-ನೃತ್ಯ ವೈಭವ: ಸಂಗೀತ ವಿದುಷಿ ಶ್ರೇಯ ಕೊಳತ್ತಾಯರ ಸುಶ್ರಾವ್ಯ ಗಾಯನಕ್ಕೆ ದಾವಣಗೆರೆಯ ಚಿತ್ರಕಲಾವಿದ ಬಾಬಲೇಶ್ವರ ಕುಂಚದಲ್ಲಿ ಚಿತ್ರಕಲೆ ರೂಪಿಸಿದರೆ ಮಂಗಳೂರಿನ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿಶೇಖರ್ ನೃತ್ಯ ಪ್ರದರ್ಶನ ನೀಡಲಿದ್ದಾರೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya
error: Content is protected !!