April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

ಉಜಿರೆ: ಮಹಾರಾಷ್ಟ್ರದ ಮಹಾತ್ಮ ಗಾಂಧಿ ಇನ್ಸ್ಟಿಟ್ಯೂಟ್ ಫಾರ್ ರೂರಲ್ ಇಂಡಸ್ಟ್ರಿಯಲೈಸೇಶನ್ (ಎಂ ಜಿ ಐ ಆರ್ ಐ) ಸಂಸ್ಥೆಯ ವತಿಯಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್.ಡಿ.ಎಂ.-ರೋಟರಿ ಕರಿಯರ್ ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್ ಸೆಂಟರ್ ಹಾಗೂ ಎಸ್.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ (ಎಸ್.ಡಿ.ಎಂ.ಐ.ಟಿ., ಉಜಿರೆ) ಸಹಯೋಗದಲ್ಲಿ ‘ಎಂ ಜಿ ಐ ಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು’ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರವು ಉಜಿರೆ ಎಸ್.ಡಿ.ಎಂ. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆ.12ರಂದು ನಡೆಯಲಿದೆ.

ಬೆಳ್ತಂಗಡಿಯ ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ್ ಕೆ.ಎನ್. ಅವರು ಬೆಳಗ್ಗೆ 10ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಎಂ.ಜಿ.ಐ.ಆರ್.ಐ. ಸಂಸ್ಥೆಯ ನಿರ್ದೇಶಕ ಡಾ. ಅಶುತೋಷ್ ಎ. ಮುರ್ಕುಟೆ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಉಜಿರೆಯ ರುಡ್ ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ್, ಎಂ.ಜಿ.ಐ.ಆರ್.ಐ. ಸಂಸ್ಥೆಯ ಪ್ರಧಾನ ವೈಜ್ಞಾನಿಕ ಅಧಿಕಾರಿ (ಖಾದಿ ಮತ್ತು ಜವಳಿ) ಎಚ್.ಡಿ. ಸಿನ್ನೂರ್ ಹಾಗೂ ಉಜಿರೆ ಎಸ್.ಡಿ.ಎಂ.ಐ.ಟಿ. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿದಿದ್ದಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya
error: Content is protected !!