30.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

ನಿಡ್ಲೆ: ಉಜಿರೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ಆ.4ರಂದು ನಡೆದಿದೆ.

ನಿಡ್ಲೆ ಗ್ರಾಮದ ಶ್ರೇಯಸ್ ಉಪಾಧ್ಯಾಯ (38ವ) ಎಂಬವರು ಆ.4ರಂದು ಬೆಳಿಗ್ಗೆ ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು, ಆದರೆ ವಾಪಾಸ್ ಮನೆಗೆ ಬಂದಿಲ್ಲ. ಅಲ್ಲದೇ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಮನೆಮಂದಿ ಹುಡುಕಾಟ ನಡೆಸಿ ನಂತರ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾಣೆಯಾದ ದಿನ ಶ್ರೇಯಸ್ ಉಪಾಧ್ಯಾಯ ರವರು ಹಸಿರು ಬಣ್ಣದ ಟಿ-ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು ತುಳು, ಕನ್ನಡ, ಇಂಗ್ಲಿಷ್, ಹಿಂದಿ ಮಾತನಾಡಬಲ್ಲರು. ಈ ವ್ಯಕ್ತಿ ಎಲ್ಲಿಯಾದರೂ ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಗೆ ತಿಳಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

Related posts

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!