24.4 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿ

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

ಸೌಜನ್ಯ ಪ್ರಕರಣವನ್ನು ರಾಜ್ಯದ ಪೋಲಿಸ್ ಇಲಾಖೆಯ ವಿಶೇಷ ತನಿಖಾ ತಂಡ ತನಿಖೆ ನಡೆಸುವಂತೆ ಒತ್ತಾಯ

ರಾಜ್ಯಾದ್ಯಂತ ಹೆಚ್ಚಿನ ಸಂಘಟನೆಗಳು ಮಹಾಧರಣಿಯಲ್ಲಿ ಭಾಗವಹಿಸಲಿದೆ: ಮಾಜಿ ಶಾಸಕ ವಸಂತ ಬಂಗೇರ

ಬೆಳ್ತಂಗಡಿ: ರಾಜ್ಯ ಸರಕಾರ ಸೌಜನ್ಯ ಪ್ರಕರಣದ ತನಿಖೆಗಾಗಿ ದಕ್ಷ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಬೇಕು.ಉಜಿರೆ,ಧರ್ಮಸ್ಥಳ ಭಾಗಗಳಲ್ಲಿ ನಡೆದಿರುವ ಅಸಹಜ ಸಾವುಗಳನ್ನು ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಗಷ್ಟ್ 28 ರಂದು ರಾಜ್ಯಮಟ್ಟದ ಚಲೋ ಬೆಳ್ತಂಗಡಿ ಮಹಾಧರರಣಿ ನಡೆಯಲಿದೆ ಎಂದು ಮಾಜಿ ಶಾಸಕ ಹೇಳಿದರು.

ಅವರು ಆಗಷ್ಟ್ 10 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ಪತ್ರಿಗೋಷ್ಠಿಯಲ್ಲಿ ಮಾತಾನಾಡಿದರು.

ಸೌಜನ್ಯ ಪ್ರಕರಣ ನಡೆದ ಸಂದರ್ಭದಲ್ಲಿ ದೊಡ್ಡ ರೀತಿಯ ಪ್ರತಿಭಟನೆಗಳು ನಡೆದಿತ್ತು. ಜನಾಗ್ರಹವನ್ನು ಪರಿಗಣಿಸಿ ಅಂದಿನ ಸಿದ್ದರಾಮಯ್ಯ ಸರಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು‌. ನ್ಯಾಯಲಯದ ತೀರ್ಪಿನ ನಂತರ ಜನತೆ ಸಿಬಿಐ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದು ಮತ್ತೆ ರಾಜ್ಯದ ಪೋಲೀಸ್ ಇಲಾಖೆಯ ವಿಶೇಷ ತನಿಖಾ ತಂಡ ತನಿಖೆ ನಡೆಸಲಿ ಎಂದು ಬಂಗೇರರು ಆಗ್ರಹಿಸಿದರು.

ಮುಗ್ಧ, ಬಡ ಹೆಣ್ಣು ಮಗಳು ಸೌಜನ್ಯಳಿಗೆ ನ್ಯಾಯ ಸಿಗಬೇಕು. ಸೌಜನ್ಯ ಪ್ರಕರಣದಲ್ಲಿ ಯಾರೂ ಯಾವತ್ತು ರಾಜಕೀಯ ಮಾಡಬಾರದು. ಬೆಳ್ತಂಗಡಿ ಚಲೋ ಮಹಾಧರಣಿಗೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಹಾಗೂ ದ.ಕ ಜಿಲ್ಲೆಯ ಎಲ್ಲಾ ತಾಲೂಕುಗಳಿಂದಲೂ ದೊಡ್ಡ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ ಎಂದರು. ಈ ಸಂದರ್ಭ ಚಲೋ ಬೆಳ್ತಂಗಡಿ ಮಹಾ ಧರಣಿಯ ಪೋಸ್ಟರನ್ನು ಬಿಡುಗಡೆ ಗೊಳಿಸಲಾಯಿತು.

ಪತ್ರಿಗೋಷ್ಠಿಯಲ್ಲಿ ಕಾರ್ಮಿಕ ನಾಯಕರಾದ ಬಿ.ಎಮ್ ಭಟ್,ಡಿ.ವೈ.ಎಫ್.ಐ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷ ಮುನೀರ್ ಕಾಟಿಪಳ್ಳ,ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪ್ರಮುಖರಾದ ವಸಂತ ಬಿ.ಕೆ,ರಮೇಶ್ ಆರ್,ಸಿಪಿಎಮ್ ಜಿಲ್ಲಾ ಕಾರ್ಯದರ್ಶಿ ಯಾಧವ ಶೆಟ್ಟಿ, ಪ್ರಮುಖರಾದ ಜಯವಿಕ್ರಮ್ ಕಲ್ಲಾಪು ಉಪಸ್ಥಿತರಿದ್ದರು.

Related posts

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya
error: Content is protected !!