24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಧರ್ಮಾಧ್ಯಕ್ಷ ಹಾಗೂ ಬೆಳ್ತಂಗಡಿ ತಾಲೂಕು ಸೌಹಾರ್ದ ವೇದಿಕೆ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರಿಗೆ ಆ.11 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು.

ಅವರ ಅಧಿಕೃತ ನಿವಾಸಕ್ಕೆ ತೆರಳಿದ ಲಯನ್ಸ್ ಸದಸ್ಯರನ್ನು ಪರಿಚಯಿಸಿಕೊಂಡ ಬಿಷಪ್ ಅವರು ವಿಶೇಷ ಪ್ರಾರ್ಥನೆ ಮೂಲಕ ಆಶೀರ್ವದಿಸಿದರು. ಭೇಟಿ ಮಾಡಿದ ಎಲ್ಲರಿಗೂ ಸಿಹಿತಿಂಡಿ ನೀಡಿ ಪುರಸ್ಕರಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಯನ್ಸ್ ಸದಸ್ಯರುಗಳಾದ ಬಿ.ಪಿ ಅಶೋಕ್ ಕುಮಾರ್, ಧರಣೇಂದ್ರ ಕೆ ಜೈನ್, ಧತ್ತಾತ್ರೇಯ ಗೊಲ್ಲ, ವಿನ್ಸೆಂಟ್ ಟಿ ಡಿಸೋಜಾ ಉಪಸ್ಥಿತರಿದ್ದರು. ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ಸಂಯೋಜಿಸಿದರು.

Related posts

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya
error: Content is protected !!