April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಭಾರತದ ಸ್ವಾತಂತ್ಯ ಅಮೃತ ಮಹೋತ್ಸವ ವರ್ಷದ ಸಲುವಾಗಿ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಒಂದಾದ ಪಂಚಪ್ರಾಣ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಪಂಚಪ್ರಾಣ ಪ್ರತಿಜ್ಞೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬೋಧಿಸಿದರು. ಅಭಿವೃದ್ದಿ ಭಾರತದ ನಿರ್ಮಾಣದಲ್ಲಿ ಪಾಲ್ಗೊಳ್ಳುವಿಕೆ , ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವುದು, ದೇಶದ ಏಕತೆ ಮತ್ತು ಒಗ್ಗಟ್ಟಿಗೆ ಶ್ರಮಿಸುವುದು , ದೇಶಕ್ಕಾಗಿ ನನ್ನ ಕರ್ತವ್ಯ , ತ್ಯಾಗ ಬಲಿದಾನ ಮಾಡಿದ ವೀರರಿಗೆ ಗೌರವ ಸಮರ್ಪಣೆ ಮತ್ತು ಕರ್ತವ್ಯ ಪ್ರಜ್ಞೆ ಮೂಡಿಸುವ ಪ್ರತಿಜ್ಞೆಯನ್ನು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಕೈಗೊಂಡರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಹಾಗೂ ಎಲ್ಲಾ ಸ್ವಯಂಸೇವಕರು ಉಪಸ್ಥಿತರಿದ್ದು ಪ್ರತಿಜ್ಞೆ ಸ್ವೀಕರಿಸಿದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya
error: Content is protected !!