September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಚಿಕಿತ್ಸೆ ಲಭಿಸದೆ ಕಳೆದೆರಡು ದಿನಗಳ ಹಿಂದೆ ಹಸುಗೂಸು ಸಾವನ್ನಪ್ಪಿದೆ ಎಂಬ ಆರೋಪದ ವಿಚಾರಣೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಕುಮಾರ್ ಅವರು ಆ.10 ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತ ಮಗುವಿನ ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡ ಜಿಲ್ಲಾ ಆರೋಗ್ಯಾಧಿಕಾರಿಯವರು ಆಯ್ಕೆಯಲ್ಲಿರುವ ಮಗು ದಾಖಲಾದ ಬಗೆಗಿನ ದಾಖಲೆಗಳನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಮಗುವಿನ ವಿಳಂಬವಾದ ಬಗ್ಗೆ ಅವರು ಹೇಳಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮನೆಯವರ ಹೇಳಿಕೆ ಹಾಗೂ ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲಿಸುತ್ತೇವೆ. ಯಾವುದಾದರೂ ರೀತಿಯಲ್ಲಿ ವಿಳಂಬವಾಗಿರುವುದು ಕಂಡು ಬಂದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯ ಮಕ್ಕಳ ತಜ್ಞರು ಎರಡು ಬಾರಿ ಬಂದು ಮಗುವನ್ನು ಪರೀಕ್ಷಿಸಿದ್ದಾರೆ ಎಂದು ತಿಳಿಸಿದ ಅವರು ನ್ಯುಮೋನಿಯಾದೊಂದಿಗೆ ಮಗು ಬಂದಿದೆ. ಅಗತ್ಯ ಚಿಕಿತ್ಸೆ ನೀಡಿದ್ದಾರೆ. ಆದರೆ ಮಗು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂಬ ಮಾಹಿತಿ ಇದೆ ಎಂದರು.

ಸರಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ಕ್ಲಿನಿಕ್ ನಡೆಸಿಕೊಂಡು ಆಸ್ಪತ್ರೆಯಲ್ಲಿ ಬರುವ ರೋಗಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು, ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂಬ ಸಾರ್ವಜನಿಕರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಪರಿಶೀಲಿಸಲಾಗುವುದು ಎಂದರು.

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರು ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಮಗುವಿನ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya
error: Content is protected !!