July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

ನಡ: ಬೆಳ್ತಂಗಡಿ ತಾಲ್ಲೂಕು ಮಟ್ಟದ ಯೋಗ ಸ್ಪರ್ದೆ ಸರಕಾರಿ ಪ್ರೌಢಶಾಲೆ ನಡದಲ್ಲಿ ಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ ರವರು ನೆರವೇರಿಸಿದರು.

ಈ ಸ್ಪರ್ಧೆಯನ್ನು ಯೋಗಾಸನ ಮುದ್ರೆಯ ಪ್ರತಿಕೃತಿಯನ್ನು ಅನಾವರಣಗೊಳಿಸಿ ಹಾಗೂ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯೋಗವು ನಮ್ಮ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತೀ ಅಗತ್ಯವೆಂದು ಹೇಳಿದರು. ನಡ ಗ್ರಾಮ ಪಂಚಾಯತಿನ ನಿರ್ಗಮನ ಅಧ್ಯಕ್ಷ ವಿಜಯ ಗೌಡ ಇವರು ಅಧ್ಯಕ್ಷತೆಯನ್ನು ವಹಿಸಿದ್ದು, ಭಾರತೀಯ ಪರಂಪರೆಯಾದ ಯೋಗವನ್ನು ಬದುಕಿನಲ್ಲಿ ಅಳವಡಿಸಿಕೊಂಡು, ದೇಶದ ಘನತೆಯನ್ನು ಹೆಚ್ಚಿಸುವವಲ್ಲಿ ಕಾಣಿಕೆ ನೀಡಲು ಕರೆ ನೀಡಿದರು.

ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಸುಧಾಕರ್, ಸದಸ್ಯರುಗಳಾದ ಲಕ್ಷ್ಮಣ ನಾಯ್ಕ, ಆನಂದ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಯಾಕೂಬ್ ಎಸ್ ಸ್ವಾಗತಿಸಿ, ದೈಹಿಕ ಶಿಕ್ಚಣ ಶಿಕ್ಷಕಿ ಶ್ರೀಮತಿ ಸುಜಯ ಬಿ ಧನ್ಯವಾದವಿತ್ತರು. ಹಿಂದಿ ಶಿಕ್ಷಕ ಮೋಹನ ಬಾಬು ಕಾರ್ಯಕ್ರಮದ ನಿರೂಪಣೆಗೈದರು. ತಾಲೂಕಿನಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಿಂದ ನೂರಕ್ಕೂ ಮಿಕ್ಕಿದ ಸ್ಪರ್ಧಾಳುಗಳು ಭಾಗವಹಿಸುತ್ತಿದ್ದಾರೆ.

Related posts

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya
error: Content is protected !!