23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ಹಾಗೂ ಆಗಸ್ಟ್ 17ರಂದು ನಡೆಯುವ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಪ್ರಯುಕ್ತ ಶಾಲಾ ಮೇಲುಸ್ತುವಾರಿ ಸಮಿತಿ ಹಾಗೂ ಇಲ್ಲಿಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶ್ರಮದಾನವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಶ್ರಮದಾನದಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರುಗಳು ಹಳೆ ವಿದ್ಯಾರ್ಥಿಗಳು, ಶಾಲಾ ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳು ಮತ್ತು ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಿದರು.

ಭಾಗವಹಿಸಿದ ಎಲ್ಲರಿಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕಿಯರು, ಮೇಲುಸ್ತುವಾರಿ ಸಮಿತಿಯವರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಧನ್ಯವಾದ ಅರ್ಪಿಸಿ ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಕೇಳಿಕೊಂಡರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿನಯ ಕೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮಾಯಿಲಪ್ಪ ಗೌಡ ಉಮಿಯ, ಕೂಸಪ್ಪ ಗೌಡ ನಾಗನೊಡಿ, ಪ್ರಧಾನ ಕಾರ್ಯದರ್ಶಿಯಾದ ಪಿ ಚಂದ್ರಶೇಖರ್ ಸಾಲ್ಯಾನ್, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಹರೀಶ್ ಗೌಡ ಬಜಿಲ, ಶಾಲಾ ಮುಖ್ಯೋಪಾಧ್ಯಾಯರಾದ ಬಳಿರಾಮ ಲಮಾಣಿ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಗೌಡ ಪಾಂಬೇಲು ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya
error: Content is protected !!