April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಧರ್ಮಸ್ಥಳ: “ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಮೈಗೂಡಿಸಿಕೊಂಡು ಪ್ರತಿಭಾನ್ವಿತರಾದಾಗ ಸುಂದರವಾದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ” ಎಂದು ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ಉಜಿರೆ ಇಲ್ಲಿಯ ಕನ್ನಡ ಉಪನ್ಯಾಸಕರಾದ ಶ್ರೀ ಮಹಾವೀರ ಜೈನ್ ಹೇಳಿದರು.

ಅವರು ಆ.11ರಂದು ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದ 2023-24ನೇ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ , ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ ಶೆಟ್ಟಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ದಿವಾಕರ ಕೊಕ್ಕಡ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಎನ್ ಪದ್ಮರಾಜು ಅಧ್ಯಕ್ಷತೆ ವಹಿಸಿದ್ದರು. “

ವಿವಿಧ ಸಂಘಗಳ ವಿದ್ಯಾರ್ಥಿ ಪ್ರತಿನಿಧಿಗಳು ತಮ್ಮ ಸಂಘಗಳ ವಾರ್ಷಿಕ ಯೋಜನೆಯನ್ನು ಮಂಡಿಸಿದರು. ಇದೇ ಸಂದರ್ಭದಲ್ಲಿ 2022- 23 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 20 ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಶಶಿಧರ ಸ್ವಾಗತಿಸಿ, ಶಿಕ್ಷಕಿ ಭವ್ಯ ಹೆಗಡೆ ವಂದಿಸಿದ ಈ ಕಾರ್ಯಕ್ರಮವನ್ನು ಶಿಕ್ಷಕ ಯುವರಾಜ ನಿರೂಪಿಸಿದರು.

Related posts

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!