April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

ನಿಟ್ಟಡೆ:  ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು 2023-24ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆಯು ಆ.7ರಂದು ಜರುಗಿತು.

ನಾಯ್ನಾಡ್ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮಿಸ್ಟರ್ ಜಾಯಲ್ ಲೋಬೊ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಸಂಚಾಲಕ ಗಿರೀಶ್ ಕೆ.ಎಚ್ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ನಾಯಕನಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಹೇಮಂತ್ ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಆಶಾರಾಣಿ ಹಾಗೂ ಉಳಿದ 14 ಪದಾಧಿಕಾರಿಗಳು ಪ್ರಮಾಣವಚನ ಸ್ವೀಕರಿಸಿದರು. ಅಧ್ಯಕ್ಷರು ಮತ್ತು ಉದ್ಘಾಟಕರು ವಿದ್ಯಾರ್ಥಿಗಳನ್ನುದ್ದೇಶಿಸಿ ಹಿತವಚನಗಳನ್ನು ನೀಡಿದರು. ಉತ್ತಮ ಅವಕಾಶಗಳನ್ನು ಬಾಚಿಕೊಳ್ಳಲು ಕರೆ ನೀಡಿದರು.

ವೇದಿಕೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲಕ ಓಮನ ಎಂ.ಎ, ಉಪ ಪ್ರಾಚಾರ್ಯೆ ಅಶ್ವಿನಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅಕ್ಷತಾ ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಸಿಂಚನ ಹಾಗೂ ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಿತ್ ಸ್ವಾಗತಿಸಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಕ್ಷಯ್ ವಂದಿಸಿದರು.

Related posts

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya
error: Content is protected !!