26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

ಉಜಿರೆ: ಮಹಾರಾಷ್ಟ್ರದ ಮಹಾತ್ಮ ಗಾಂಧಿ ಇನ್ಸ್ಟಿಟ್ಯೂಟ್ ಫಾರ್ ರೂರಲ್ ಇಂಡಸ್ಟ್ರಿಯಲೈಸೇಶನ್ (ಎಂ ಜಿ ಐ ಆರ್ ಐ) ಸಂಸ್ಥೆಯ ವತಿಯಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್.ಡಿ.ಎಂ.-ರೋಟರಿ ಕರಿಯರ್ ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್ ಸೆಂಟರ್ ಹಾಗೂ ಎಸ್.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ (ಎಸ್.ಡಿ.ಎಂ.ಐ.ಟಿ., ಉಜಿರೆ) ಸಹಯೋಗದಲ್ಲಿ ‘ಎಂ ಜಿ ಐ ಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು’ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರವು ಉಜಿರೆ ಎಸ್.ಡಿ.ಎಂ. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆ.12ರಂದು ನಡೆಯಿತು.

ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜರ್ನಾದನ್ ಕೆ.ಎನ್ ಕಾರ್ಯಕ್ರಮ ಉದ್ಘಾಟಿಸಿದರು. ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಂ.ಜಿ.ಐ.ಆರ್.ಐ. ಸಂಸ್ಥೆಯ ನಿರ್ದೇಶಕ ಡಾ. ಅಶುತೋಷ್ ಎ. ಮುರ್ಕುಟೆ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಎಂ.ಜಿ.ಐ.ಆರ್.ಐ. ಸಂಸ್ಥೆಯ ಪ್ರಧಾನ ವೈಜ್ಞಾನಿಕ ಅಧಿಕಾರಿ (ಖಾದಿ ಮತ್ತು ಜವಳಿ) ಎಚ್.ಡಿ. ಸಿನ್ನೂರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಗೋಪಾಲಕೃಷ್ಣ ಕಾಂಚೋಡು ಉಜಿರೆ ಮತ್ತು ಜಗನ್ನಾಥ ಶೆಟ್ಟಿ ಸುಳ್ಯ ಇವರನ್ನು ಸನ್ಮಾನಿಸಲಾಯಿತು. ಕಾರ್ಯದರ್ಶಿ ಹರೀಶ್ ಶೆಟ್ಟಿ ಸ್ವಾಗತಿಸಿದರು.

Related posts

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya
error: Content is protected !!