ಬೆಳ್ತಂಗಡಿ: ಉಜಿರೆ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಒತ್ತಾಯಿಸಿ, ಆ. 27ರಂದು ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ಶಾಸಕರುಗಳು ಬೆಳ್ತಂಗಡಿಯ ಮಿನಿ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಬಳಿಕ ಸೌಜನ್ಯ ಹತ್ಯೆ ಪ್ರಕರಣವನ್ನು ಮರುತನಿಗೆ ಒಳಪಡಿಸಬೇಕು ಎಂದು ಆಗ್ರಹಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.
ಅವರು ಆ.12ರಂದು ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸೌಜನ್ಯ ಹೋರಾಟಕ್ಕೆ ನ್ಯಾಯ ಕೊಡಿಸಲು ಬಿಜೆಪಿ ಬದ್ಧವಾಗಿದೆ. ಸುಧೀರ್ಘ 11ವರ್ಷಗಳ ಕಾಲ ತನಿಖೆ ನಡೆದಿದೆ ಮೊದಲಿಗೆ ಸಿಐಡಿ ತನಿಖೆ, ನಂತರ ಸಿಬಿಐ ತನಿಖೆ ಕೂಡ ನಡೆದು ಇದ್ದ ಒಬ್ಬ ಆರೋಪಿ ಕೂಡ ಈಗ ಬಿಡುಗಡೆಯಾಗಿದ್ದಾರೆ. ಹಾಗಾಗಿ ಸೌಜನ್ಯಳಿಗೆ ನ್ಯಾಯ ಸಿಕ್ಕಿಲ್ಲ ನಾವು ಸೌಜನ್ಯ ಕುಟುಂಬದ ಜೊತೆ ಇದ್ದು ಈ ಪ್ರಕರಣದಲ್ಲಿ ನ್ಯಾಯಾಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಇದೇ ತಿಂಗಳ ಆಗಸ್ಟ್ 27ರಂದು ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ಶಾಸಕರುಗಳು ಬೆಳ್ತಂಗಡಿಯ ಮಿನಿ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಅಂದು ನಡೆಯುವ ಪ್ರತಿಭಟನೆಯ ನಂತರ, ಸೌಜನ್ಯ ಹತ್ಯೆ ಪ್ರಕರಣವನ್ನು ಮರುತನಿಗೆ ಒಳಪಡಿಸಬೇಕು ಎನ್ನುವ ಆಗ್ರಹದ ಮನವಿಯನ್ನು ಮುಖ್ಯಮಂತ್ರಿಗಳಿಗೆ ತಲುಪಿಸಲಾಗುವುದು. ತದನಂತರ ಇದೇ ಮನವಿಯನ್ನು ರಾಜ್ಯಪಾಲರ ಬಳಿಯೂ ಬಿಜೆಪಿ ನಿಯೋಗವನ್ನು ಕೊಂಡೊಯ್ಯಲಾಗುವುದು ಮತ್ತು ಮರು ತನಿಖೆ ನಡೆಸಲು ಒತ್ತಾಯಿಸಲಾಗುವುದು ಎಂದು ನಳಿನ್ ಕುಮಾರ್ ಕಟೀಲ್ ಈ ಸಂದರ್ಭ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಶಾಸಕ ಹರೀಶ್ ಪೂಂಜ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸಹಿತ ಇತರ ಪ್ರಮುಖರ ಜೊತೆ ಸುದ್ದಿಗೋಷ್ಠಿ ಕರೆದಿದ್ದರು.