ಉಜಿರೆ: ತುಳುನಾಡಿನ ವಿಶಿಷ್ಟ ಸಾಂಪ್ರದಾಯಿಕ ಆಚರಣೆ ಯಾದ ಆಟಿದ ಗೌಜಿ ಕಾರ್ಯಕ್ರಮ ಶ್ರೀ. ಧ. ಮo. ಪ ಪೂ ಕಾಲೇಜಿನಲ್ಲಿ ಆಯೋಜಿಸಲಾಯಿತು. ಕಾರ್ಯ್ರಮದ ಉದ್ಘಾಟನೆಯನ್ನು ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ ಶೆಟ್ಟಿ ನೆರವೇರಿಸಿದರು.
ಪ್ರಧಾನ ಭಾಷಣಕಾರರಾದ ಕವಿತಾ ಉಮೇಶ್, ಮುಖ್ಯ ಅತಿಥಿಯಾಗಿ ಶ್ರೀ ಧ.ಮಂ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಯುವರಾಜ ಪೂವಣಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ವಹಿಸಿದ್ದರು.
ಇದೇ ಸಂದರ್ಭದಲ್ಲಿ ತುಳುನಾಡಿನ ಸಂಪ್ರದಾಯಗಳಲ್ಲಿ ಒಂದಾದ ಆಟಿ ಕಳೆಂಜ ನೃತ್ಯ , ಆಟಿಯ ವಿಶೇಷ ತಿನಿಸುಗಳ ಪ್ರದರ್ಶನ, ಪುರಾತನ ವಸ್ತುಗಳು ಹಾಗೂ ಗಿಡಮೂಲಿಕೆಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ವಿದ್ಯಾರ್ಥಿನಿ ಬಿಂದುಶ್ರೀ ಸ್ವಾಗತಿಸಿ ದೀಕ್ಷಿತ್ ವಂದಿಸಿದರು. ವಿದ್ಯಾರ್ಥಿನಿ ರಶ್ಮಿತ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಯಕ್ಷಿತ್ ಕಾರ್ಯಕ್ರಮ ನಿರೂಪಿಸಿದರು. ಕಲಾವಿಭಾಗದ ಅಧ್ಯಾಪಕರು ಕಾರ್ಯಕ್ರಮ ಸಂಯೋಜನೆಗೆ ಸಹಕರಿಸಿದರು.