September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

ವೇಣೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ನೇತೃತ್ವದಲ್ಲಿ ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಇದರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮೇಳವು ಆ.12ರಂದು ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂದಿರದಲ್ಲಿ ಉದ್ಘಾಟನೆಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಅವರು ಕಾರ್ಯಕ್ರಮ ಉದ್ಘಾಟಿಸಿ, ಸರಕಾರ ತರುವ ಹಲವಾರು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವುದು ಸವಾಲಿನ ಕೆಲಸವಾಗಿದೆ. ಇಂತಹ ಶಿಬಿರಗಳ ಮೂಲಕ ಗ್ರಾಮೀಣ ಭಾಗದ ಜನರು ತಮ್ಮ ದಾಖಲೆಗಳನ್ನು ನವೀಕರಣ ಮಾಡಲು ಸುಲಭಸಾಧ್ಯವಾಗಲಿದ್ದು, ಸರಕಾರಿ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವೇಣೂರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಮೆನೇಜರ್ ವಿಶ್ವೇಶ್ವರ್, ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಅಧ್ಯಕ್ಷ ಪ್ರವೀಣ್ ಆಚಾರ್ಯ, ಅಂಚೆ ಇಲಾಖೆಯ ಹರೀಶ್ ಕಾಶಿಪಟ್ಣ, ವೇಣೂರು ಗ್ರಾ.ಪಂ. ಸದಸ್ಯರಾದ ಉಮೇಶ್ ಎನ್., ವೀಣಾ ದೇವಾಡಿಗ, ಮೂಡುಕೋಡಿ ಹಾಲು ಉ.ಸ. ಸಂಘದ ಅಧ್ಯಕ್ಷರಾದ ಪ್ರಕಾಶ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya
error: Content is protected !!