24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ 2023-24 ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಸಭೆಯು ಆ.12 ರಂದು ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರೌಢಶಾಲಾ, ಹಿರಿಯ ಪ್ರಾಥಮಿಕ, ಕಿರಿಯ ಪ್ರಾಥಮಿಕ, ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕ-ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಜಯಂತಿ, ಜಗದೀಶ್, ಪ್ರಶಾಂತ್, ಗಣೇಶ್ ಕುಂದರ್ ಇವರು ಆಯ್ಕೆಗೊಂಡರು.

ಕುಂಭಶ್ರೀ ವೈಭವದ ಮಾಜಿ ಅಧ್ಯಕ್ಷ ಹರೀಶ್ ಪೊಕ್ಕಿಯವರು ಶಾಲೆಯ ಶೈಕ್ಷಣಿಕ ಪ್ರಗತಿಯು ಉತ್ತಮ ಮಟ್ಟದಲ್ಲಿ ಬೆಳೆಯುತ್ತಿದೆ ಶಾಲೆಯ ಪ್ರಗತಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದರು. ಶಾಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವಿತ್ ಕುಲಾಲ್ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು.

ಸಭೆಯ ಅಧ್ಯಕ್ಷರಾದ, ಶಾಲಾ ಸಂಚಾಲಕ ಗಿರೀಶ್ ಕೆ.ಎಚ್ ಶಾಲೆ ಇಷ್ಟು ಎತ್ತರಕ್ಕೆ ಬೆಳೆಯಬೇಕಾದರೆ ಪೋಷಕರೇ ಕಾರಣ ಅದೇ ರೀತಿ ಮಕ್ಕಳಿಗೆ ಯಾವುದೇ ಕಾರಣಕ್ಕೂ ಮೊಬೈಲ್ ಕೊಡಬೇಡಿ ಎಂದು ಪೋಷಕರಿಗೆ ಕಿವಿಮಾತು ನೀಡಿದರು. ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಉಷಾ.ಜಿ , ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಅಕ್ಷತಾ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಪವಿತ್ರ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.

ಕಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಶ್ವೇತಾ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಗೌತಮಿ ನಿರೂಪಿಸಿ, ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಉಪ ಮುಖ್ಯಶಿಕ್ಷಕಿ ಮಮತಾ ಶಾಂತಿ ವಂದಿಸಿದರು.

Related posts

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya
error: Content is protected !!