25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ.ಎಸ್ ಆರ್ ರಂಗನಾಥ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು

ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ ದೀಪ ಬೆಳಗಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಗ್ರಂಥಾಲಯ ಮೇಲ್ವಿಚಾರಕರು ಸ್ವಾಗತಿಸಿ ಗ್ರಂಥಾಲಯ ಪಿತಾಮಹ ಎಸ್ಆರ್ ರಂಗನಾಥ ರವರ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಭಾಗವಹಿಸಿ ಗ್ರಂಥಾಲಯ ಉಪಯೋಗ ಹಾಗೂ ಅದರ ರೀತಿ ಯ ಬಗ್ಗೆ ಮಕ್ಕಳಿಗೆ ಹಿತವಚನ ನೀಡಿದರು. ಕಾರ್ಯಕ್ರಮದ ಉದ್ಘಾಟಕರು ಮಕ್ಕಳಿಗೆ ಗ್ರಂಥಾಲಯದ ಸದುಪಯೋಗ ಪಡೆಯುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು ,ಸಿಬ್ಬಂದಿಗಳು ಹಾಗೂ ಸಂಜೀವಿನಿ ಮಹಿಳಾ ಸಂಘದ ಎಂಬಿಕೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪುಸ್ತಕ ಹಾಗೂ ಪೆನ್ ನ್ನು ಪಂಚಾಯತ್ ವತಿಯಿಂದ ಕೊಡುಗೆಯಾಗಿ ನೀಡಲಾಯಿತು. ಕಾರ್ಯದರ್ಶಿ ವಂದಿಸಿದರು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya
error: Content is protected !!