23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

ವೇಣೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ನೇತೃತ್ವದಲ್ಲಿ ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಇದರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮೇಳವು ಆ.12ರಂದು ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂದಿರದಲ್ಲಿ ಉದ್ಘಾಟನೆಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಅವರು ಕಾರ್ಯಕ್ರಮ ಉದ್ಘಾಟಿಸಿ, ಸರಕಾರ ತರುವ ಹಲವಾರು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವುದು ಸವಾಲಿನ ಕೆಲಸವಾಗಿದೆ. ಇಂತಹ ಶಿಬಿರಗಳ ಮೂಲಕ ಗ್ರಾಮೀಣ ಭಾಗದ ಜನರು ತಮ್ಮ ದಾಖಲೆಗಳನ್ನು ನವೀಕರಣ ಮಾಡಲು ಸುಲಭಸಾಧ್ಯವಾಗಲಿದ್ದು, ಸರಕಾರಿ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವೇಣೂರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಮೆನೇಜರ್ ವಿಶ್ವೇಶ್ವರ್, ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಅಧ್ಯಕ್ಷ ಪ್ರವೀಣ್ ಆಚಾರ್ಯ, ಅಂಚೆ ಇಲಾಖೆಯ ಹರೀಶ್ ಕಾಶಿಪಟ್ಣ, ವೇಣೂರು ಗ್ರಾ.ಪಂ. ಸದಸ್ಯರಾದ ಉಮೇಶ್ ಎನ್., ವೀಣಾ ದೇವಾಡಿಗ, ಮೂಡುಕೋಡಿ ಹಾಲು ಉ.ಸ. ಸಂಘದ ಅಧ್ಯಕ್ಷರಾದ ಪ್ರಕಾಶ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya
error: Content is protected !!