23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಜಿರೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ದಿನೇಶ್ ಪಿ. ನೆರವೇರಿಸಿದರು.

ಈ ಸಂದರ್ಭ “ನಮ್ಮ ಶಾಲೆ ನಮ್ಮ ಕೊಡುಗೆ” ಎನ್ನುವ ವಿನೂತನ ಪರಿಕಲ್ಪನೆಯಡಿ 2013-14ನೇ ಸಾಲಿನ ಹಳೆ ವಿದ್ಯಾರ್ಥಿಗಳು ಶಾಲೆಯಲ್ಲಿರುವ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆಗೆ ದೇಣಿಗೆಯನ್ನು ಮಾನ್ಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು.

ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರಾದ ಲೋಕಯ್ಯ ಪೂಜಾರಿ, ಸುನಿಲ್ ಕುಮಾರ್, ಶ್ರೀಮತಿ ಮಲ್ಲಿಕಾ ಕಾಶಿನಾಥ್, ಸುಜಾತ, ಗ್ರಾಪಂ ಮಾಜಿ ಅಧ್ಯಕ್ಷರು ಹಾಗೂ ಎಸ್‌ಡಿಎಂಸಿ ಮಾಜಿ ಅಧ್ಯಕ್ಷರಾದ ಸತೀಶ್ ಹೆಗ್ಡೆ, ಮಾಜಿ ಎಸ್‌ಡಿಎಂಸಿ ಅಧ್ಯಕ್ಷರಾದ ಶಿವಾನಂದ ಗೌಡ, ತಾಯಂದಿರ ಸಮಿತಿ ಅಧ್ಯಕ್ಷರಾದ ಜಯಶ್ರೀ, ಮುಖ್ಯ ಶಿಕ್ಷಕಿ ಕಮಲಾಜಿ ಎಸ್. ಜೈನ್, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಪದ್ಮಾವತಿ, ಎಸ್‌ಬಿಸಿಯ ಉಪಾಧ್ಯಕ್ಷರಾದ ನವೀನ್ ಪಚ್ಚೇರಿ ಉಪಸ್ಥಿತರಿದ್ದರು.

ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಎಲ್ಲಾ ಶಿಕ್ಷಕ ವೃಂದದವರು, ಪೋಷಕರು, ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya
error: Content is protected !!