ನಾವೂರು: 77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಮತ್ತು ಡಿಜಿಟಲ್ ಗ್ರಂಥಾಲಯದ ಉದ್ಘಾಟಣೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಸುನಂದ ಇವರು ನೆರವೇರಿಸಿದರು.
ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ರಾಷ್ಟ್ರಭಕ್ತಿ ಗೀತೆಗಳನ್ನು ಹಾಡಿದರು ನಿವೃತ್ತ ಪ್ರಾಂಶುಪಾಲರಾದ ಆಂಟನಿ ಟಿ.ಪಿ ಇವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ಬಗ್ಗೆ ಮತ್ತು ದೇಶದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.
ಭಾರತೀಯ ಸೇನೆಯಲ್ಲಿ 28 ವರ್ಷ ಸೇವೆ ಸಲ್ಲಿಸಿದ ಪೂವಪ್ಪ ಗೌಡ ಇವರು ಶಿಲಾಫಲಕ ವನ್ನು ಉದ್ಘಾಟಿಸಿದರು ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಇವರಿಗೆ ಸನ್ಮಾನ ಮಾಡಲಾಯಿತು.
ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಸುನಂದ ,ಉಪಾಧ್ಯಕ್ಷರಾದ ಶ್ರೀಮತಿ ಮಮತಾ ಇವರು ವಸೂದಾ ವಂದನ ಕಾರ್ಯಕ್ರಮದಲ್ಲಿ 75 ವಿವಿಧ ಜಾತಿಯ ಗಿಡಗಳನ್ನು ನೆಡುವ ಬಗ್ಗೆ ಸಾಂಕೇತಿಕವಾಗಿ ಗಿಡಗಳನ್ನು ನೆಟ್ಟು ಕಾರ್ಯಕ್ರಮ ನೆರವೇರಿಸಿದರು. ನನ್ನ ಮಣ್ಣು ನನ್ನ ದೇಶ ಎಂಬ ಕಾರ್ಯಕ್ರಮದಲ್ಲಿ ಮಣ್ಣನ್ನು ಸಂಗ್ರಹಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಊರಿನ ಗೌರವಾನ್ವಿತ ಗಣ್ಯರು ಮತ್ತು ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು/ ಪದಾಧಿಕಾರಿಗಳು,ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು/ ಪದಾಧಿಕಾರಿಗಳು ಶಾಲಾ ಮಕ್ಕಳು,ಪಂಚಾಯಿತಿ ಪಂಚಾಯತ್ ಅಭಿವದ್ದಿ ಅಧಿಕಾರಿ,ಕಾರ್ಯದರ್ಶಿ ,ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.