April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವು ಆ.15ರಂದು ತಾಲೂಕು ಆಡಳಿತ ಸೌಧದಲ್ಲಿ ಜರುಗಿತು.

ತಾಲೂಕು ತಹಶೀಲ್ದಾರ್ ಟಿ. ಸುರೇಶ್ ಕುಮಾರ್ ಕೆ.ಎ.ಎಸ್. ರವರು ಧ್ವಜಾರೋಹಣ ನೆರವೇರಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್್ ಪೂಂಜ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಕೆ., ಪ್ರಧಾನ ಭಾಷಣಕಾರರಾಗಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಗಣಪತಿ ಭಟ್ ಕುಳಮರ್ವ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಸಿಡಿಪಿಒ ಪ್ರಿಯಾ ಆಗ್ನೇಸ್, ಮುಖ್ಯಾಧಿಕಾರಿ ರಾಜೇಶ್, ಗೃಹ ರಕ್ಷಕದಳದ ಘಟಕಾಧಿಕಾರಿ ಜಯಾನಂದ ಲಾಯಿಲ, ಮೆಸ್ಕಾಂ ಇಲಾಖೆಯ ಶಿವ ಶಂಕರ್, ಎಪಿಎಂಸಿ ಕಾರ್ಯದರ್ಶಿ ರವೀಂದ್ರ,ಬಿ.ಸಿ.ಎಂ ಇಲಾಖೆಯ ಜೋಸೆಫ್, ಅಕ್ಷರ ದಾಸೋಹ ಅಧಿಕಾರಿ ತಾರಕೇಸರಿ, ವೃತ್ತ ನಿರೀಕ್ಷಕ ನಾಗೇಶ್ ಕದ್ರಿ,
ಪಟ್ಟಣ ಪಂಚಾಯತ್ ಸದಸ್ಯರು, ಎಲ್ಲಾ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜೇಶ್ ಮತ್ತು ವಾರಿಜ ಶೇಖರ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya
error: Content is protected !!