July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ನೊಂದ ಪೋಷಕರು ಕಳೆದ ಜುಲೈ 14 ರಂದು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಶಾಲಾ ವತಿಯಿಂದ ಹಾಗೂ ಊರಿನವರ ವತಿಯಿಂದ ಮನವಿ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಒಂದು ವಾರದೊಳಗೆ ಬದಲಿ ವ್ಯವಸ್ಥೆ ಮಾಡಿಕೊಡುವುದಾಗಿ ಅಧಿಕಾರಿಗಳು
ಭರವಸೆ ನೀಡಿದ್ದರು. ಆದರೆ ಇದುವರೆಗೂ ಅಧಿಕೃತ ಶಿಕ್ಷಕರು ಶಾಲೆಗೆ ಒದಗಿಸಿಲ್ಲ. ಇದರಿಂದ ಆಕ್ರೋಶಗೊಂಡ ಪೋಷಕರು ಆ.14ರಂದು ಮಕ್ಕಳನ್ನು ಶಾಲೆಗೆ ಕಳುಹಿಸದೇ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಆ.14ರಂದು ಸಂಜೆ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಧನಂಜಯ್ ಗೌಡರವರ ಜೊತೆಗೆ ಮಾತುಕತೆ ನಡೆಸಿದ್ದರು. ಆದರೆ ಸಮಸ್ಯೆ ಪರಿಹಾರಗೊಳ್ಳದ ಕಾರಣ ಪೋಷಕರು ಮಕ್ಕಳನ್ನು ಆ.೧೫ರಂದು ಸ್ವಾತಂತ್ರ್ಯೋತ್ಸವ ಆಚರಣೆಗೆ ಶಾಲೆಗೆ ಕಳುಹಿಸದೇ ಇದ್ದ ಕಾರಣ ಶಾಲಾ ಶಿಕ್ಷಕರು, ಪಂಚಾಯತ್ ಅಧ್ಯಕ್ಷ ಮನೋಜ್, ಸದಸ್ಯರು, ಗ್ರಾಮಸ್ಥರು ಸೇರಿ ಸ್ವಾತಂತ್ರ್ಯೋತ್ಸವ ಆಚರಿಸಿದರು.

Related posts

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya
error: Content is protected !!