ಇಂದಬೆಟ್ಟು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.
ಆಜಾದಿ ಕಾ ಅಮೃತ ಮಹೋತ್ಸವ ದ ಅಂಗವಾಗಿ ‘ಪಂಚ್ ಪ್ರಾಣ್ ಪ್ರತಿಜ್ಞೆ’ ಮೂಲಕ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮವನ್ನು ದೇವನಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ಕಿಶೋರ್ ಕುಮಾರ್ ರವರು ನಿರ್ವಹಿಸಿದರು. ದೇವನಾರಿ ಶಾಲಾ ಮಕ್ಕಳು ರಾಷ್ಟ್ರಗೀತೆ, ವಂದೇ ಮಾತರಂ, ಧ್ವಜಗೀತೆ ಹಾಡಿದರು.
ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರು ಸ್ವಾತಂತ್ರ್ಯೋತ್ಸವದ ಶುಭಾಶಯಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು, ದೇವನಾರಿ ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಸಿಬ್ಬಂದಿಗಳು, ಗೆಳೆಯರ ಬಳಗ ನೇತ್ರಾವತಿ ನಗರದ ಸದಸ್ಯರು, ಸುಧರ್ಮ ಆಟೋ ರಿಕ್ಷಾ ಚಾಲಕ ಮಾಲಕರು ಇಂದಬೆಟ್ಟು, ನವಭಾರತ್ ಗೆಳೆಯರ ಬಳಗ ಕಲ್ಲಾಜೆ-ಇಂದಬೆಟ್ಟು ಸದಸ್ಯರು, ಇಂದಬೆಟ್ಟು ಗ್ರಾಮಸ್ಥರು, ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
CRT ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ರವರು ಧನ್ಯವಾದವಿತ್ತರು.