23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

ಕೊಕ್ಕಡ ಗ್ರಾಮ ಪಂಚಾಯತ್ ನ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಶ್ರೀಮತಿ ಬೇಬಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆ ಯಾದ ಪ್ರಭಾಕರ ಮಲ್ಲಿಗೆ ಮಜಲು ಇವರು ಇಂದು ಸ್ವಾತಂತ್ರ್ಯ ಉತ್ಸವ ದ ಧ್ವಜಾರೋಹಣವನ್ನು ನೆರವೇರಿಸಿ ಸೌತಡ್ಕ ಶ್ರೀ ಮಹಾಗಣಪತಿಯ ದರ್ಶನಕ್ಕೆ ಬಂದರು. ಆ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳನ್ನು ಕ್ಷೇತ್ರದ ವತಿಯಿಂದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪುರಂದರ ಕಡೀರ, ಪ್ರಶಾಂತ್ ಪೂವಾಜೆ, ಶ್ರೀಮತಿ ಹೇಮಾವತಿ ಶಿವಾನಂದ, ಶ್ರೀಮತಿ ಯಶೋಧ ಉಮೇಶ್ ಶಬರಾಡಿ, ಅರ್ಚಕರು ಶ್ರೀ ಸುಬ್ರಮಣ್ಯ ತೋಡ್ತಿಲ್ಲಾಯರು ಮತ್ತು ದೇವಳದ ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya
error: Content is protected !!