23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಜಿರೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ದಿನೇಶ್ ಪಿ. ನೆರವೇರಿಸಿದರು.

ಈ ಸಂದರ್ಭ “ನಮ್ಮ ಶಾಲೆ ನಮ್ಮ ಕೊಡುಗೆ” ಎನ್ನುವ ವಿನೂತನ ಪರಿಕಲ್ಪನೆಯಡಿ 2013-14ನೇ ಸಾಲಿನ ಹಳೆ ವಿದ್ಯಾರ್ಥಿಗಳು ಶಾಲೆಯಲ್ಲಿರುವ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆಗೆ ದೇಣಿಗೆಯನ್ನು ಮಾನ್ಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು.

ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರಾದ ಲೋಕಯ್ಯ ಪೂಜಾರಿ, ಸುನಿಲ್ ಕುಮಾರ್, ಶ್ರೀಮತಿ ಮಲ್ಲಿಕಾ ಕಾಶಿನಾಥ್, ಸುಜಾತ, ಗ್ರಾಪಂ ಮಾಜಿ ಅಧ್ಯಕ್ಷರು ಹಾಗೂ ಎಸ್‌ಡಿಎಂಸಿ ಮಾಜಿ ಅಧ್ಯಕ್ಷರಾದ ಸತೀಶ್ ಹೆಗ್ಡೆ, ಮಾಜಿ ಎಸ್‌ಡಿಎಂಸಿ ಅಧ್ಯಕ್ಷರಾದ ಶಿವಾನಂದ ಗೌಡ, ತಾಯಂದಿರ ಸಮಿತಿ ಅಧ್ಯಕ್ಷರಾದ ಜಯಶ್ರೀ, ಮುಖ್ಯ ಶಿಕ್ಷಕಿ ಕಮಲಾಜಿ ಎಸ್. ಜೈನ್, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಪದ್ಮಾವತಿ, ಎಸ್‌ಬಿಸಿಯ ಉಪಾಧ್ಯಕ್ಷರಾದ ನವೀನ್ ಪಚ್ಚೇರಿ ಉಪಸ್ಥಿತರಿದ್ದರು.

ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಎಲ್ಲಾ ಶಿಕ್ಷಕ ವೃಂದದವರು, ಪೋಷಕರು, ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!