ಬೆಳ್ತಂಗಡಿ: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡುವ ದೃಷ್ಟಿಯಿಂದ ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಹಾಗೂ ಸ್ಪೋಕನ್ ಇಂಗ್ಲೀಷ್ ಕೋಚಿಂಗ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಯಾನಂದ ಗೌಡ,ಸುವರ್ಣ ಮಹೋತ್ಸವ ಸಮಿತಿ ಕಾರ್ಯಧ್ಯಕ್ಷರು ರೊನಾಲ್ಡ್ ಲೋಬೊ ಹಾಗೂ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ. ಆಂಟನಿ ಇವರುಗಳು ಜಂಟಿಯಾಗಿ ಉದ್ಘಾಟಿಸಿದರು.
ಕಾರ್ಯಕ್ರಮದ ಯಶಸ್ಸು ವಿದ್ಯಾರ್ಥಿಗಳ ಕೈಯಲ್ಲಿದೆ ಇದರ ಸದ್ಬಳಕೆ ಮಾಡಿಕೊಂಡು ತಮ್ಮ ಅಮೂಲ್ಯವಾದ ಜೀವನವನ್ನು ರೂಪಿಸಿಕೊಳ್ಳಿ ಎಂಬ ಸಲಹೆ ನೀಡಿದರು. ಯಾವುದೇ ಫಲಾಫೇಕ್ಷೆ ಇಲ್ಲದೆ ತರಬೇತಿ ನೀಡುತ್ತಿರುವ ಉಪನ್ಯಾಸಕರನ್ನು ಮುಕ್ತ ಕಂಠದಿಂದ ಪ್ರಶಂಶಿಸಿದರು.
ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಸುಕುಮಾರ್ ಜೈನ್ ವಹಿಸಿದ್ದರು. ಗಣಿತಶಾಸ್ತ್ರ ಉಪನ್ಯಾಸಕರಾದ ಮೋಹನ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರದ ಶೀನಾ ನಾಡೋಳಿ ಸ್ವಾಗತಿಸಿದರೆ ಉಪನ್ಯಾಸಕ ಗಣಪತಿ ಭಟ್. ವಂದನಾರ್ಪಣೆಗೈದರು. ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.