30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

ಬೆಳ್ತಂಗಡಿ: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡುವ ದೃಷ್ಟಿಯಿಂದ ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಹಾಗೂ ಸ್ಪೋಕನ್ ಇಂಗ್ಲೀಷ್ ಕೋಚಿಂಗ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಯಾನಂದ ಗೌಡ,ಸುವರ್ಣ ಮಹೋತ್ಸವ ಸಮಿತಿ ಕಾರ್ಯಧ್ಯಕ್ಷರು ರೊನಾಲ್ಡ್ ಲೋಬೊ ಹಾಗೂ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ. ಆಂಟನಿ ಇವರುಗಳು ಜಂಟಿಯಾಗಿ ಉದ್ಘಾಟಿಸಿದರು.

ಕಾರ್ಯಕ್ರಮದ ಯಶಸ್ಸು ವಿದ್ಯಾರ್ಥಿಗಳ ಕೈಯಲ್ಲಿದೆ ಇದರ ಸದ್ಬಳಕೆ ಮಾಡಿಕೊಂಡು ತಮ್ಮ ಅಮೂಲ್ಯವಾದ ಜೀವನವನ್ನು ರೂಪಿಸಿಕೊಳ್ಳಿ ಎಂಬ ಸಲಹೆ ನೀಡಿದರು. ಯಾವುದೇ ಫಲಾಫೇಕ್ಷೆ ಇಲ್ಲದೆ ತರಬೇತಿ ನೀಡುತ್ತಿರುವ ಉಪನ್ಯಾಸಕರನ್ನು ಮುಕ್ತ ಕಂಠದಿಂದ ಪ್ರಶಂಶಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಸುಕುಮಾರ್ ಜೈನ್ ವಹಿಸಿದ್ದರು. ಗಣಿತಶಾಸ್ತ್ರ ಉಪನ್ಯಾಸಕರಾದ ಮೋಹನ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರದ ಶೀನಾ ನಾಡೋಳಿ ಸ್ವಾಗತಿಸಿದರೆ ಉಪನ್ಯಾಸಕ ಗಣಪತಿ ಭಟ್. ವಂದನಾರ್ಪಣೆಗೈದರು. ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ನಿಡ್ಲೆ: ಪಿಲಿಕಜೆ ನಿವಾಸಿ ಸುಗುಣ ನಿಧನ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!