29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ವತಿಯಿಂದ 76ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ| ಸ್ಟ್ಯಾನಿ ಗೋವಿಯಸ್ ಧ್ವಜಾರೋಹಣ ನೆರವೇರಿಸಿದರು.

ಅವರು ಆ. 15 ಭಾರತೀಯರು ಚರಿತ್ರೆಯನ್ನು ಅವಲೋಕಿಸುವ ಸುದಿನ. ಇಂದು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸುವುದು ಮುಖ್ಯವಾಗಿದೆ. ಪ್ರಪಂಚದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಸಾರಿದ ಏಕೈಕ ರಾಷ್ಟ್ರವೆಂದರೆ ಅದು ಭಾರತ ಮಾತ್ರ.
ನಿರುದ್ಯೋಗ, ಭ್ರಷ್ಟಾಚಾರ, ಅಸಹಿಷ್ಣುತೆ ದೂರವಾಗಿರಲಿ ಆಶಾವಾದಿಗಳಾಗಿ ಮಹಾತ್ಮ ಗಾಂಧೀಜಿ ಕಂಡ ಕನಸು ನನಸಾಗಿಸೋಣ, ರಾಷ್ಟ್ರ ನಮಗೆ ಏನನ್ನು ಕೊಡುತ್ತದೆ ಇದು ಮುಖ್ಯವಲ್ಲ ನಾವು ರಾಷ್ಟ್ರಕ್ಕಾಗಿ ಯಾವ ಕೊಡುಗೆಯನ್ನು ನೀಡುತ್ತೇವೆ ಇದು ಬಹಳ ಮುಖ್ಯ. ಕಾನೂನು, ಸೌಹಾರ್ದತೆ, ಸಾಮರಸ್ಯಕ್ಕೆ ಧಕ್ಕೆ ತರದೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡರೆ ದೇಶ ಸೇವೆ ಮಾಡಿದಂತೆ, ರಾಷ್ಟ್ರ ಅಭಿವೃದ್ಧಿಯ ಕಾರ್ಯದಲ್ಲಿ ಸರ್ವರು ಕೈಜೋಡಿಸೋಣ ಎಂದು ಅವರು ತಮ್ಮ ಸಂದೇಶವನ್ನು ನೀಡಿದರು.


ಸೇಕ್ರೆಡ್ ಹಾರ್ಟ್ ಚರ್ಚ್ ನ ಸಹಾಯಕ ಧರ್ಮ ಗುರುಗಳಾದ ವಂ|ವಿಲಿಯಂ ಡಿ ಸೋಜ ,ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೋರಸ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೊಮ್ ಡಿಸೋಜಾ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ವಂ| ದೀಪಕ್ ಡೇಸಾ, ಗಾರ್ಡಿಯನ್ ಏಂಜಲ್ಸ್ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಹೆಲೆನ್ ಮೋನಿಕಾ ಲೊಬೊ, ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿ ಲಿಯೋ ನರೋನ್ಹಾ, ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಎನ್. ಸಿ.ಸಿ, ಕಬ್ಸ್, ಸ್ಕೌಟ್ಸ್ , ಬುಲ್ ಬುಲ್,ಗೈಡ್ಸ್, ಮುಂತಾದ ತಂಡಗಳಿಂದ ಆಕರ್ಷಕ ಪಥ ಸಂಚಲನ ಜರುಗಿತು. ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಅಲೆಕ್ಸ್ ಐವನ್ ಪಿಂಟೋ ಸ್ವಾಗತಿಸಿ, ವಿದ್ಯಾರ್ಥಿನಿ ಅಫ್ರೀನ್ ತಾಜ್ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಸೇಕ್ರೆಡ್ ಹಾರ್ಟ್ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್ ವಂದಿಸಿದರು, ಉಪನ್ಯಾಸಕ ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya
error: Content is protected !!