24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸ್ಥಳೀಯರಾದ ಸತೀಶ್ ಭಟ್ ರವರು ಆಗಮಿಸಿ, ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿದರು. ರು. ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಸತೀಶ್ ಭಟ್ ರವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಗಳ ಬಗ್ಗೆ ಗುಣಗಾನ ಮಾಡುತ್ತಾ, ಸ್ವಾತಂತ್ರ್ಯಕ್ಕಾಗಿ ಹಲವು ಜನ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಅವರೆಲ್ಲರ ತ್ಯಾಗ ಮತ್ತು ಬಲಿದಾನದ ಪರಿಣಾಮವಾಗಿ ನಾವಿಂದು ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ, ಈ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವುದು ಹಾಗೂ ದೇಶವನ್ನು ಶಕ್ತಿಯುತಗೊಳಿಸುವುದು ನಮ್ಮಆದ್ಯ ಕರ್ತವ್ಯ ಆಗಿದೆ ಎಂದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ಉಪಸ್ಥಿತರಿದ್ದು ಮಾತನಾಡಿ ಭಾರತ ದೇಶದ ಹಿರಿಮೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ವಿದ್ಯಾರ್ಥಿಗಳಾದ ನಿಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಸಿನರಾಗಿದ್ದ ಪುದುವೆಟ್ಟು ಗ್ರಾಮ ಪಂಚಾಯಿತಿಯ ಸದಸ್ಯರಾದ ಶ್ರೀಮತಿ ವನಿತಾ ಸೇರಿರುವ ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶೀನಪ್ಪಗೌಡರವರು ಬ್ರಿಟಿಷರ ಆಳ್ವಿಕೆಯಲ್ಲಿದ್ದಂತಹ ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದಂತಹ ಸಂದರ್ಭಗಳನ್ನು ತಿಳಿಸಿದರು . ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸ್ವಾತಂತ್ರ್ಯ ದಿನಾಚರಣೆಯ ಕುರಿತಾದ ಭಾಷಣ ಹಾಗೂ ದೇಶಭಕ್ತಿ ಗೀತೆಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶಾಲೆಯಲ್ಲಿ ಈ ಮೊದಲೇ ಏರ್ಪಡಿಸಲಾಗಿದ್ದ ಚಿತ್ರಕಲೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಬಹುಮಾನದ ವೆಚ್ಚವನ್ನು ಪುದುವೆಟ್ಟು ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗಿತ್ತು.

ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶ್ರೀಮತಿ ಶೀಲಾ ಎನ್ ರವರು ಸ್ವಾಗತಿಸಿ, ಸುಮತಿ ಸುಜಾತಾ ರವರು ಧನ್ಯವಾದ ಗೈದ ಕಾರ್ಯಕ್ರಮವನ್ನು ಶ್ರೀಮತಿ ಪುಷ್ಪಲತಾ ರವರು ನಿರೂಪಿಸಿದರು. ನಿಶಾಂತ್ ಕುಮಾರ್ ಮುಖ್ಯ ಅತಿಥಿಗಳ ಕಿರುಪರಿಚಯ ವನ್ನು ಮಂಡಿಸಿದರು.

ನಂತರ ಭವ್ಯ ಮೆರವಣಿಗೆ ಮೂಲಕ ಸ್ವಾತಂತ್ರ್ಯ ಘೋಷಣೆಗಳನ್ನು ಕೂಗುತ್ತಾ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಎಲ್ಲ ಶಿಕ್ಷಕ ವೃಂದದವರು, ಶಾಲೆಯ ಅಕ್ಷರ ದಾಸೋಹದ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Related posts

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya
error: Content is protected !!