30.5 C
ಪುತ್ತೂರು, ಬೆಳ್ತಂಗಡಿ
April 11, 2025
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಆಟಿ ತಿಂಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ‘ಆಟಿದ ಗಮ್ಮತ್ತ್’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
 
ಕಾರ್ಯಕ್ರಮವನ್ನು ದೈವನರ್ತಕ ಹಾಗೂ ಉಜಿರೆ ಎಸ್ ಡಿ ಎಂ ಐಟಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವೀಶ್ ಪಡುಮಲೆ ಇವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿರಿಯರು ಸಾಗಿಸುತ್ತಿದ್ದ ಜೀವನ ಮತ್ತು ಆಟಿ ತಿಂಗಳಲ್ಲಿ ಸೇವಿಸುತ್ತಿದ್ದ ಆಹಾರಗಳ ಬಗ್ಗೆ ತಿಳಿಸಿದರು. 
 
ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಎಲ್ಲರೂ ಸೇರಿ ಒಂದೇ ತಾಯಿಯ ಮಕ್ಕಳಂತೆ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಿದ್ದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 
ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ, ತುಳುನಾಡಿನ ಸಂಸ್ಕೃತಿ ಸಾರುವ ಹಳೆಯ ವಸ್ತುಗಳ ಪ್ರದರ್ಶನ, ಆಟಿ ತಿಂಗಳಿನ ವಿಶೇಷ ಆಹಾರ ವಸ್ತುಗಳ ಪ್ರದರ್ಶನ, ಶಾಲೆಯ ಗದ್ದೆಯಲ್ಲಿ ಹಗ್ಗ ಜಗ್ಗಾಟ, ಲೆಮನ್ ಮತ್ತು ಸ್ಪೂನ್ ಓಟ ಹಾಗೂ ಅಡಿಕೆ ಹಾಳೆ ಎಳೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
 
ವಿದ್ಯಾರ್ಥಿಗಳಾದ ಚಿನ್ಮಯ್ ಪ್ರಾರ್ಥಿಸಿ, ಅನುಶ್ರೀ ಸ್ವಾಗತಿಸಿ, ನಿಧಿ ವಂದಿಸಿದರು. ವಿದ್ಯಾರ್ಥಿನಿ ನಿಧಿ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya
error: Content is protected !!