ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಎಪ್ಪತ್ತೇಳನೇ ಸ್ವಾತಂತ್ರ್ಯೋತ್ಸವ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ಹರ್ಷಕುಮಾರ್ ಉಜರೆಯವರು ಮಾತನಾಡುತ್ತಾ, ವರ್ಷಕ್ಕೊಮ್ಮೆ ಆಚರಿಸುವ ರಾಷ್ಟ್ರೀಯ ಹಬ್ಬ ಇದು. ಈ ಮೂಲಕ ದೇಶಕ್ಕಾಗಿ ತ್ಯಾಗ ಮಾಡಿದವರನ್ನು ನೆನೆದು, ಅವರ ಬದುಕಿನ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಸ್ವಾತಂತ್ರ್ಯ ದಿನಾಚರಣೆ ಎಂದು ಹೇಳಿದರು. ಇನ್ನೋರ್ವ ಅತಿಥಿಗಳಾದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲರವರು ಉಪಸ್ಥಿತರಿದ್ದರು.
ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು.
ಆರಂಭದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಕೊಲ್ಲಿಮಾರ್ ರವರು ಧ್ವಜಾರೋಹಣ ಮಾಡಿ ಶುಭಹಾರೃಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿಯವರು ಹಾಜರಿದ್ದರು.
ವಿದ್ಯಾರ್ಥಿಗಳಾದ ಮನೋಜ್, ಇಂದುಮತಿ ಮತ್ತು ಫಾತಿಮತ್ ಝುಹ ಅನಿಸಿಕೆ ವ್ಯಕ್ತಪಡಿಸಿದರು. ಶ್ರೇಯಸ್ ಸ್ವಾಗತಿಸಿ, ರಕ್ಷಾ ವಂದಿಸಿದರು, ತೃಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಕಲಾ ಕಾರ್ಯಕ್ರಮಗಳು ಜರಗಿತು.