28.7 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

ವೇಣೂರು: ಇಲ್ಲಿಯ ಸರಕಾರಿ ಪ್ರೌಢಶಾಲೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಬಗ್ಗೆ ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆಯು ಇಂದು ಇಲ್ಲಿಯ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಜರಗಿತು.


ಶಾಲೆಗೆ ಸರಕಾರದಿಂದ ಅನುದಾನ ಮಂಜೂರುಗೊಂಡು ನೂತನ ಕಟ್ಟಡ ನಿರ್ಮಾಣವಾಗಿದ್ದು, ಶಾಲೆಯ ಸ್ಥಳಾಂತರದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.


ನೂತನ ಕಟ್ಟಡದಲ್ಲಿ ಕೇವಲ ಎಂಟು ಕೊಠಡಿಗಳಷ್ಟೇ ಇದ್ದು, ಮಕ್ಕಳ ಸಂಖ್ಯೆಗನುಗುಣವಾಗಿ ಇನ್ನಷ್ಟು ತರಗತಿ ಕೊಠಡಿಗಳು, ಶಿಕ್ಷಕರ ಮತ್ತು ಕಚೇರಿ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಶೌಚಾಲಯಗಳು ಮುಂತಾದ ಮೂಲಭೂತ ಸೌಲಭ್ಯಗಳ ಕೊರತೆಯ ಬಗ್ಗೆ ಸಭೆಯನ್ನು ಚರ್ಚೆ ನಡೆಯಿತು.


ಶಾಲೆಯ ಉಪಪ್ರಾಚಾರ್ಯರಾದ ವೆಂಕಟೇಶ್ ಎಸ್. ತುಳುಪುಳೆ ಅವರು ಮಾತನಾಡಿ, ಶಾಲೆಯಲ್ಲಿ ಪ್ರಸ್ತುತ 3 ತರಗತಿಗಳಲ್ಲಿ 600 ವಿದ್ಯಾರ್ಥಿಗಳು ವಿದ್ಯಾರ್ಜನೆ ಪಡೆಯುತ್ತಿದ್ದಾರೆ. ಇದು ತಾಲೂಕು ಮಾತ್ರವಲ್ಲದೆ ಜಿಲ್ಲೆಯಲ್ಲೇ ಸರಕಾರಿ ಶಾಲೆಯ ಅತ್ಯಧಿಕ ಮಕ್ಕಳಿರುವ ಶಾಲೆಯಾಗಿದೆ. ಇಲ್ಲಿ ವರ್ಷಕ್ಕಿಂತ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಮೂಲಸೌಲಭ್ಯಗಳ ಕೊರತೆ ಎದುರಾಗಿದೆ. ಶಾಲೆಯ ಪೂರ್ಣ ತರಗತಿಗಳನ್ನು ಸ್ಥಳಾಂತರ ಮಾಡಲೂ ಸಾಧ್ಯವಾಗುತ್ತಿಲ್ಲ ಎಂದರು.


ಸರಕಾರದಿಂದ ಅನುದಾನದ ಬೇಡಿಕೆ ಇಡುವುದರ ಜತೆಗೆ, ವಿವಿಧ ಸಂಘ ಸಂಸ್ಥೆಗಳು ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹಿಸಿ ನೂತನ ಕಟ್ಟಡದಲ್ಲಿ ಮೂಲಸೌಲಭ್ಯಗಳನ್ನು ತಾತ್ಕಾಲಿಕವಾಗಿ ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸಲಾಯಿತು.


ಇದೇ ಸಂದರ್ಭದಲ್ಲಿ ಶಿಕ್ಷಕ ವ್ರಂದದವರು ಹಾಗೂ ಹಲವು ಹಿರಿಯ ವಿದ್ಯಾರ್ಥಿಗಳು ದೇಣಿಗೆಯನ್ನು ಶಾಲೆಗೆ ಹಸ್ತಾಂತರಿಸಿದರು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಸಂಗೀತ ಶಿಕ್ಷಕಿ ಅನುಸೂಯ ಪಾಟಕ್ ಪ್ರಾರ್ಥಿಸಿ, ಜ್ಯೋತಿ ಜ್ಯುಲಿಯೆಟ್ ಸ್ವಾಗತಿಸಿದರು. ಶಿಕ್ಷಕ ರವೀಂದ್ರ ಅವರು ಪ್ರಾಸ್ತಾವಿಸಿ, ವಂದಿಸಿದರು.

Related posts

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya
error: Content is protected !!