ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ಕಕ್ಕಿಂಜೆ : ಸರಕಾರಿ ಪ್ರೌಢಶಾಲೆ ಕಕ್ಕಿಂಜೆ ಇಲ್ಲಿ ಸುಮಾರು 10 ವರ್ಷದಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ಪುಂಜಾಲಕಟ್ಟೆ ಪ್ರೌಢಶಾಲೆಗೆ ವರ್ಗಾವಣೆಗೊಂಡ ಮೋಹನಾನಂದ ಮತ್ತು ಕಳೆದ ಆರು ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ ಇವರು ದಾವಣಗೆರೆ ಜಿಲ್ಲೆಗೆ ವರ್ಗಾವಣೆಗೊಂಡಿದ್ದು ಇವರಿಗೆ ಆ.17 ರಂದು ಸರಕಾರಿ ಪ್ರೌಢಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ರವಿಕುಮಾರ್ ಹಾಗೂ ಎಸ್ ಡಿ ಎಂ ಸಿ ಯ ಸದಸ್ಯರುಗಳಾಗಿರುವ ಶ್ರೀನಿವಾಸ್ ಕುಲಾಲ್, ಕೊರಗಪ್ಪ ಕುಂಬಾರ , ವಸಂತ ಕೃಷ್ಣಪ್ಪ ಮತ್ತು ಶ್ರೀಮತಿ ಶಶಿಕಲ ಇವರುಗಳ ಮುಂದಾಳತ್ವದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು. ಕುಮಾರಿ ಅಂಜಲಿ ಸ್ವಾಗತಿಸಿ, ಕುಮಾರಿ ಸಾಧನ ಧನ್ಯವಾದವಿತ್ತರು

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಶಿಶಿಲ :2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!