September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮುಂದಾಳತ್ವವನ್ನು ವಹಿಸಿಕೊಂಡಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ಮನವಿ ಮೇರೆಗೆ ಕರ್ನಾಟಕ ರಾಜ್ಯ ಸರಕಾರವು ಇಬ್ಬರು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ.

ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಆಗಸ್ಟ್ 17 ರಂದು ಸಂಜೆ ಬೆಂಗಳೂರಿನಲ್ಲಿ ಭೇಟಿ ಮಾಡಿ ಮಹೇಶ್ ಶೆಟ್ಟಿಯವರಿಗೆ ಹೋರಾಟ ಮಾಡುವ ಉದ್ದೇಶದಿಂದ ರಕ್ಷಣೆಗಾಗಿ ಇಬ್ಬರು ಗನ್ ಮ್ಯಾನ್ ನೀಡಲು ಮನವಿ ನೀಡಿದ್ದರು.

ಮನವಿ ಸ್ವೀಕರಿಸಿದ ಗೃಹ ಸಚಿವ ಪರಮೇಶ್ವರ್ ದಕ್ಷಿಣ ಕನ್ನಡ ಎಸ್ಪಿ ರೀಷ್ಯಂತ್ ಅವರಿಗೆ ಗನ್ ಮ್ಯಾನ್ ನೀಡಲು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿಯವರು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಗನ್ ಮ್ಯಾನ್ ಪಡೆಯಲು ಮನವಿ ಪತ್ರ ನೀಡಿದ್ದರು. ಇದರ ಬಗ್ಗೆ ಎಸ್ಪಿ ಗುಪ್ತಚರ ಇಲಾಖೆಗೆ ವರದಿ ನೀಡಲು ಆದೇಶ ನೀಡಿದ್ದರು. ಗುಪ್ತಚರ ಇಲಾಖೆಯ ವರದಿಯಲ್ಲಿ ಯಾವುದೇ ಜೀವ ಬೆದರಿಕೆಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಇಲ್ಲವೆಂದು ಎಸ್ಪಿಗೆ ಗುಪ್ತಚರ ಇಲಾಖೆ ವರದಿ ನೀಡಿದ್ದರು. ಅದ್ದರಿಂದ ಗನ್‌ಮ್ಯಾನ್ ನೀಡಲು ಪೊಲೀಸ್ ಇಲಾಖೆ
ಮುಂದಾಗಿರಲಿಲ್ಲ.

Related posts

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಂಜಿತ್ ಎಚ್ ಡಿ ಬಳಂಜರವರಿಗೆ ಜೆಸಿಯ ವಲಯ 15ರ ಸಾಧನಾ ಶ್ರೀ ಪ್ರಶಸ್ತಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!