24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬದನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ,ಮತ್ತು ಸರಕಾರಿ ಪ್ರೌಢ ಶಾಲೆ ಬದನಾಜೆ ಇವರುಗಳು ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮ ನಡೆಯಿತು.

ವಲಯದ ಅಧ್ಯಕ್ಷರಾದ ಉಮ್ಮಾರಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿದರು

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ನಂದಕುಮಾರ್ ಪಿ ಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಾದಕ ವ್ಯಸನವೆಂಬುದೊಂದು ರೋಗ. ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ಹದಿಹರೆಯದಲ್ಲಿನ ಒತ್ತಡಗಳು, ತಂದೆ – ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು, ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ.

ಆರೋಗ್ಯಪೂರ್ಣ ವ್ಯಕ್ತಿಗಳನ್ನು ಸಮಾಜಕ್ಕೆ ಕೊಡುವಲ್ಲಿ ನಮ್ಮೆಲ್ಲರ ಪಾತ್ರವಿದೆ. ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಪ್ರತಿಜ್ಞಾ ವಿಧಿ ಭೋದಿಸಿದರು.

ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಜಮುನಾ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳೊಂದಿಗೆ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಉಮಾರಬ್ಬ ವಲಯಾಧ್ಯಕ್ಷರು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಶ್ರೀ ಬಾಬು ನಾಯ್ಕ್ ಅಧ್ಯಕ್ಷರು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆ ಉಪಸ್ಥಿತರಿದ್ದರು.

ಸಂಸ್ಥೆಯ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು
128 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ವಲಯ ಮೇಲ್ವಿಚಾರಕರು ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಾ ಭಾಗವಹಿಸಿದರು, ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!