September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

ಗುಂಡೂರಿ : ಶ್ರೀ ಕ್ಷೆ.ಧ.ಗ್ರಾ.ಯೋ.ಗುಂಡೂರಿ ಒಕ್ಕೂಟ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಗುಂಡೂರಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ತುಂಬೆದಲೆಕ್ಕಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ ಆಯೋಜಿಸಲಾಯಿತು.

ಆರಂಬೋಡಿ ಗ್ರಾಮ ಪಂಚಾಯಿತು ಉಪಾಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಜಂತೋಡಿಗುತ್ತು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಗುಂಡೂರಿ ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿಮಜಲ್, ಕಾರ್ಯದರ್ಶಿ ಶ್ರೀ ಸತೀಶ್ ಕುಲಾಲ್ ತುಂಬೆದಲೆಕ್ಕಿ, ಜನಜಾಗೃತಿ ತಾಲೂಕು ಸಮಿತಿ ಸದಸ್ಯ ಹರೀಶ್ ಕುಮಾರ್ ಪೊಕ್ಕಿ, ಗ್ರಾಮ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ಕೊಯಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತೇಜಸ್ವಿನಿ,ಕು! ದೀಕ್ಷಿತಾ, ವೇಣೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ನವೀನ್ ಪೂಜಾರಿ ಪಚ್ಚೇರಿ, ದೈಹಿಕ ಶಿಕ್ಷಕ ಮಹಾವೀರ್ ಜೈನ್ ಕಜೆ, ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಗೌರವಾಧ್ಯಕ್ಷೆ ಶ್ರೀಮತಿ ಉಷಾ ನೆಲ್ಯರಡ್ಡ, ಅಧ್ಯಕ್ಷೆ ಶ್ರೀಮತಿ ಸಂಗೀತಾ ಉಪಸ್ಥಿತರಿದ್ದರು.

ಶ್ರೀ ಪ್ರವೀಣ್ ಆಚಾರ್ಯ ಸ್ವಾಗತಿಸಿದರು, ಸೇವಾಪ್ರತಿನಿಧಿ ಹರೀಶ್ ಬಾಡಾರು ನಿರೂಪಿಸಿ ವಂದಿಸಿದರು.

Related posts

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya
error: Content is protected !!