32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ‘ಸಾಧನಾ ಪ್ರಶಸ್ತಿ’

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2022-23 ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ?ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2022-23 ಪ್ರಶಸ್ತಿಯನ್ನು ಆ.19 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2022-23ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.


ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012 ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್ ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. 2023ನೇ ಸಾಲಿನಲ್ಲಿ 2000 ಕೋಟಿಗೂ ಮಿಕ್ಕಿ ವ್ಯವಹಾರದೊಂದಿಗೆ, ದುಡಿಯುವ ಬಂಡವಾಳ 22118.10 ಲಕ್ಷ ಹೊಂದಿದ್ದು, ರೂ. 2.32 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ.
ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಬಿ. ನಿರಂಜನ್, ಭಾಸ್ಕರ್ ಎಸ್. ಕೋಟ್ಯಾನ್, ಟಿ.ಜಿ. ರಾಜಾರಾಮ ಭಟ್, ಎಂ. ವಾದಿರಾಜ್ ಶೆಟ್ಟಿ, ಎಸ್.ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ಎಸ್.ಬಿ.ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಕೆ.ಹರಿಶ್ಚಂದ್ರ,
ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿಯಾದ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ರಾವ್, ದ.ಕ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್, ರಮೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಪ್ರ) ಗೋಪಾಲಕೃಷ್ಣ ಭಟ್ ಕೆ., ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರಾದ ರಮಾನಾಥ್ ಸನಿಲ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Related posts

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya
error: Content is protected !!