September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿಗಳ ಸಭೆಯು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ನವಾಝ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸದಾತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಮತ್ತು ಶಾಕೀರ್ ಅಳಕೆಮಜಲು ಹಾಗೂ ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮದ್ದ ಅವರು ಆಗಮಿಸಿದ್ದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು “ಫ್ಯಾಶಿಷ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ” ಎಂಬ ಧ್ಯೇಯ ವಾಕ್ಯದೊಂದಿಗೆ ದ್ವಜಾರೋಹಣವನ್ನು ಜಿಲ್ಲಾಧ್ಯ ಅನ್ವರ್ ಸದಾತ್ ಬಜತ್ತೂರು ನೆರವೇರಿಸಿದರು.

ಕಳೆದ ಅವಧಿಯ ಪಕ್ಷದ ಚಟುವಟಿಕೆಗಳ ವರದಿ ಮಂಡಿಸಿ, ಜಿಲ್ಲಾ ವೀಕ್ಷಕರ ಸಮ್ಮುಖದಲ್ಲಿ ಕ್ಷೇತ್ರ ಸಮಿತಿಯಲ್ಲಿ ಕೆಲವೊಂದು ಬದಲಾವಣೆ ಮಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ನೂತನ ಸಮಿತಿಯನ್ನು ಮತ್ತು ಬ್ಲಾಕ್ ಸಮಿತಿಯನ್ನು ಅಂತರಿಕ ಚುನಾವಣೆ ಮೂಲಕ ರಚಿಸಲಾಗಿದೆ.
ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ನವಾಝ್ ಕಟ್ಟೆ, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ, ಜೊತೆ ಕಾರ್ಯದರ್ಶಿಗಳಾಗಿ ಫಝಲ್ ಉಜಿರೆ, ಸಾದಿಕ್ ಲಾಯಿಲ, ಕೋಶಾಧಿಕಾರಿಯಾಗಿ ಅಶ್ರಫ್ ಕಟ್ಟೆ ಆಯ್ಕೆಯಾದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಪಂಚಾಯತ್ ಸದಸ್ಯರು, ಮಹಿಳಾ ಘಟಕದ ನಾಯಕಿಯರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ಪದಾಧಿಕಾರಿಗಳು, ಪಕ್ಷದ ಹಿರಿಯರು ಉಪಸ್ಥಿತರಿದ್ದರು.

Related posts

ಕರಾಟೆ ಪಂದ್ಯಾಟ: ಕೊಯ್ಯೂರು ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಥಮ್ ದ್ವಿತೀಯ ಸ್ಥಾನ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಡಾ. ಎಂ ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya
error: Content is protected !!