ಮರೋಡಿ: ನಾರಾವಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟವನ್ನು ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಉದ್ಘಾಟಿಸಲಾಯಿತು.
ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್ ಪಂದ್ಯಾಟಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು.
ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಾಕರ ಬುಣ್ಣಾನ್ ಅಧ್ಯಕ್ಷತೆ ವಹಿಸಿದ್ದರು.
ಸಮೂಹ ಸಂಪನ್ಮೂಲ ವ್ಯಕ್ತಿ ಕಿರಣ್, ದೈಹಿಕ ಶಿಕ್ಷಣ ನೋಡೆಲ್ ಅಧಿಕಾರಿ ಕೃಷ್ಣಪ್ಪ ಪೂಜಾರಿ, ಮರೋಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶುಭರಾಜ ಹೆಗ್ಡೆ, ಸದಸ್ಯ ಅಶೋಕ ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ, ಉಪಾಧ್ಯಕ್ಷ ಯೋಗೇಂದ್ರ ಆಚಾರ್ಯ, ಸದಸ್ಯ ಅಬೂಬಕ್ಕರ್ ಇದ್ದರು.
ಶಾಲಾ ಮುಖ್ಯಶಿಕ್ಷಕಿ ಸುಫಲಾ ಸ್ವಾಗತಿಸಿದರು. ಸಹ ಶಿಕ್ಷಕಿ ಸುಜಿತಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಅಕ್ಷತಾ ರಾಣಿ ವಂದಿಸಿದರು
ಫಲಿತಾಂಶ: ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸಾವ್ಯ ಸರ್ಕಾರಿ ಶಾಲೆ ಪ್ರಥಮ, ಅಳದಂಗಡಿ ಚರ್ಚ್ ಶಾಲೆ ದ್ವಿತೀಯ ಬಹುಮಾನ ಪಡೆದವು.
ಬಾಲಕಿಯರ ವಿಭಾಗದಲ್ಲಿ ಅಂಡಿಂಜೆ ಸರ್ಕಾರಿ ಶಾಲೆ ಪ್ರಥಮ ಮತ್ತು ಸಾವ್ಯ ಸರ್ಕಾರಿ ಶಾಲೆ ದ್ವಿತೀಯ ಸ್ಥಾನ ಪಡೆಯಿತು.
ನಾರಾವಿ ವಲಯದ ಎಂಟು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದರು.