32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಧರ್ಮಸ್ಥಳ ಸಿಎ ಬ್ಯಾಂಕಿನ ಅಧ್ಯಕ್ಷ ಪ್ರೀತಮ್ ಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಹೊಳ್ಳ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಧರ್ಮಸ್ಥಳ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!