April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಹತ್ಯಡ್ಕ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹತ್ಯಡ್ಕ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಹತ್ಯಡ್ಕ ಸಿಎ ಬ್ಯಾಂಕಿನ ಅಧ್ಯಕ್ಷ ರಾಘವೇಂದ್ರ ನಾಯಕ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್ ಟಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಹಿಂದಿನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್, ಹತ್ಯಡ್ಕ ಸಿಎ ಬ್ಯಾಂಕಿನ ನಿರ್ದೇಶಕರಾದ ಧರ್ಮರಾಜ್ ಗೌಡ ಅಡ್ಕಡಿ, ಕುಶಾಲಪ್ಪ ಗೌಡ , ಸಿಬ್ಬಂದಿ ಕೃಷ್ಣಪ್ಪ ಗೌಡ ಉಪಸ್ಥಿತರಿದ್ದರು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya
error: Content is protected !!