24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕಡ ವಲಯದ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ಕಡ ದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಭಾಕರ ಗೌಡ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.

ಸಂಪನ್ಮೂಲಗಳ ವ್ಯಕ್ತಿಯಾಗಿ ಡಾ, ಮೋಹನ್ ದಾಸ್ ಗೌಡ ರವರು ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾದರೆ ಹೊರಬರಲು ಕಷ್ಟ ಸಾಧ್ಯ, ಗುಟ್ಕಾ ವಿಮಲ್ ಮುಂತಾದ ಹಾನಿಕಾರಕ ವಸ್ತುಗಳಿಂದ ಮಕ್ಕಳು ದೂರ ಇರುವಂತೆ ಹಾಗೂ ಪ್ರತಿಜ್ಞೆ ಮಾಡಿಸುವುದರೊಂದಿಗೆ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ರೈ ಯವರು ವಹಿಸಿಕೊಂಡಿದ್ದು ಕಾರ್ಯಕ್ರಮದ ಬಗ್ಗೆ ಶ್ಲಾಘನೇ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಒಕ್ಕೂಟದ ವಲಯಾಧ್ಯಕ್ಷರು ಶೇಷಪ್ಪ ಮೂಲ್ಯ, ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಪ್ರಭಾಕರ್, ಗ್ರಾಮ ಪಂಚಾಯತ್ ಸದಸ್ಯರಾದ ಪ್ರೇಮ ಜಾನಕಿ, ಸೇವಾಪ್ರತಿನಿಧಿ ಅನಿತಾ ರೋಹಿಣಿ ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ ಯವರು ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರು ಜೋಳಿ ಜೇಕೊಬ್ ಸ್ವಾಗತಿಸಿ ಉಪನ್ಯಾಸಕರಾದ ಜಲಜ ವಂದಿಸಿದರು.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya
error: Content is protected !!