April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಮಚ್ಚಿನ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮಚ್ಚಿನ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಮಚ್ಚಿನ ಸಿಎ ಬ್ಯಾಂಕಿನ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಯಕ್ಷಣ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಮಚ್ಚಿನ ಸಿಎ ಬ್ಯಾಂಕಿನ ನಿರ್ದೇಶಕರುಗಳಾದ ರಾಜೇಶ್ ನಾಯಕ್, ಸುಜಾತ ಪಿ ಸಾಲ್ಯಾನ್, ಬೇಬಿ ,ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!