22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ಪೆರಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪೆರಾಡಿ 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಪೆರಾಡಿ ಸಿಎ ಬ್ಯಾಂಕಿನ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಯು.ಶೇಖ್ ಲತೀಫ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಪೆರಾಡಿ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya
error: Content is protected !!