ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ವತಿಯಿಂದ ಪೋಕ್ಸೋ ಕಾಯಿದೆ ಹಾಗೂ ರಸ್ತೆ ಸಾರಿಗೆ ಸುರಕ್ಷತೆ ಮತ್ತು ನಿಯಮಗಳು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ನಂದಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಲೈಂಗಿಕ ದೌರ್ಜನ್ಯಗಳ ಬಗ್ಗೆ ಮಕ್ಕಳು ತಿಳಿದುಕೊಂಡು ಎಚ್ಚರಿಕೆಯಿಂದ ಇರಬೇಕು.ಸಮಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು, ದೌರ್ಜನ್ಯಗಳು ನಡೆದಾಗ ಯಾವುದೇ ಒತ್ತಡ,ಭಯ ಆತಂಕಕ್ಕೆ ಒಳಗಾಗದೆ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು.ಪೋಕ್ಸೋ ಕಾಯಿದೆ ಮಕ್ಕಳ ಸಂಪೂರ್ಣ ರಕ್ಷಣೆಗೆ ಇರುವ ಕಾಯಿದೆ ಎಂದು ಅವರು ವಿವಿಧ ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ರಸ್ತೆ ಸಾರಿಗೆ ಸುರಕ್ಷತೆ ಮತ್ತು ನಿಯಮಗಳ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಓಡಿಯಪ್ಪ ಗೌಡ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೊಮ್ ಡಿಸೋಜಾ ಪ್ರಾಸ್ತಾವಿಕ ಮಾತುಗಳ್ನಾಡಿ ಸ್ವಾಗತಿಸಿದರು.
ಉಪನ್ಯಾಸಕರುಗಳಾದ ವಸಂತ್ ಶೆಟ್ಟಿ ವಂದಿಸಿ, ಸೂರಜ್ ಚಾರ್ಲ್ಸ್ ಕಾರ್ಯಕ್ರಮ ನಿರೂಪಿಸಿದರು.